NIFT Recruitment 2019: 30 ಸಹಾಯಕ ಡೇಟಾಬೇಸ್ ನಿರ್ವಾಹಕ ಮತ್ತು ಇಂಜಿನಿಯರ್ ಹುದ್ದೆಗಳ ನೇಮಕಾತಿ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ (ಎನ್‌ಐಎಫ್‌ಟಿ) 30 ಸಹಾಯಕ ಡೇಟಾಬೇಸ್ ನಿರ್ವಾಹಕ ಮತ್ತು ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ಬೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನವೆಂಬರ್ 29,2019ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಗಾಗಿ ಮುಂದೆ ಓದಿ.

ಎನ್‌ಐಎಫ್‌ಟಿ 30 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

 

CRITERIA DETAILS
Name Of The Posts ಸಹಾಯಕ ಡೇಟಾಬೇಸ್ ನಿರ್ವಾಹಕ ಮತ್ತು ಇಂಜಿನಿಯರ್
Organisation ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ (ಎನ್‌ಐಎಫ್‌ಟಿ)
Educational Qualification ಎಂ.ಟೆಕ್ /ಎಂಸಿಎ, ಬಿ.ಟೆಕ್, ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ, ಇಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ
Job Location ಭಾರತದೆಲ್ಲೆಡೆ
Salary Scale ಸಹಾಯಕ ಡೇಟಾಬೇಸ್ ನಿರ್ವಾಹಕ - ತಿಂಗಳಿಗೆ 15,600/- ರಿಂದ 39,100/-ರೂ ಮತ್ತು ಇಂಜಿನಿಯರ್ -ತಿಂಗಳಿಗೆ 9,300/- ರಿಂದ 34,800/-ರೂ
Application Start Date October 1, 2019
Application End Date November 29, 2019

ವಿದ್ಯಾರ್ಹತೆ:

ಸಹಾಯಕ ಡೇಟಾಬೇಸ್ ನಿರ್ವಾಹಕ ಹುದ್ದೆಗಳಿಗೆ ಎಂ.ಟೆಕ್/ಎಂಸಿಎ ವಿದ್ಯಾರ್ಹತೆ, ಕಂಪ್ಯೂಟರ್ ಇಂಜಿನಿಯರ್ ಹುದ್ದೆಗಳಿಗೆ ಬಿ.ಟೆಕ್ ವಿದ್ಯಾರ್ಹತೆ ಮತ್ತು ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಸಿವಿಲ್‌ ಇಂಜಿನಿಯರಿಂಗ್‌ ಮತ್ತು ಇಲೆಕ್ಟ್ರಿಕಲ್‌ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಆಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಸಹಾಯಕ ಡೇಟಾಬೇಸ್ ನಿರ್ವಾಹಕ ಹುದ್ದೆಗಳಿಗೆ ಗರಿಷ್ಟ 35 ವರ್ಷ, ಕಂಪ್ಯೂಟರ್ ಇಂಜಿನಿಯರ್ ಹುದ್ದೆಗಳಿಗೆ ಕನಿಷ್ಟ 25 ರಿಂದ ಗರಿಷ್ಟ 40ವರ್ಷ ಮತ್ತು ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಕನಿಷ್ಟ 25 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಸಹಾಯಕ ಡೇಟಾಬೇಸ್ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/- ರಿಂದ 39,100/-ರೂ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,300/- ರಿಂದ 34,800/-ರೂ ವೇತನವನ್ನು ನೀಡಲಾಗುವುದು.

 

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ,ಕೌಶಲ್ಯ ಪರೀಕ್ಷೆ ಮತ್ತು ಟೆಕ್ನಿಕಲ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಹಾಯಕ ಡೇಟಾಬೇಸ್ ನಿರ್ವಾಹಕ ಹುದ್ದೆಗಳಿಗೆ ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ ಮತ್ತು ಓಬಿಸಿ ಅಭ್ಯರ್ಥಿಗಳು 1000/-ರೂ ಮತ್ತು ಇಂಜಿನಿಯರ್ ಹುದ್ದೆಗಳಿಗೆ 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ ?:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲುಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ (ಎನ್‌ಐಎಫ್‌ಟಿ)ಯ ಅಧಿಕೃತ ವೆಬ್‌ಸೈಟ್‌ https://nift.ac.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 29,2019ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಇಲಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
NIFT recruitment notification has been released on official website for the recruitment of 30 assistant database administrator and engineer posts. Interested candidates can apply through online.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more