
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ 42 ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಮೇ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಪಿಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,400/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 1,180/-ರೂ ಅರ್ಜಿ ಶುಲ್ಕವನ್ನು ಡಿಡಿ/ಬ್ಯಾಂಕ್ ಚೆಕ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅರ್ಜಿಯನ್ನು ಮೇ 7,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
The Registrar,
NIFT Campus,
Hauz Khas,
Near Gulmohar park,
New delhi-110016.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











