ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಯಲ್ಲಿ ಅವಶ್ಯವಿರುವ ಗುಮಾಸ್ತ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಟ್ಟು 24 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನವರಿ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ
ಹುದ್ದೆಯ ಹೆಸರು: ಕೆಳ ದರ್ಜೆಯ ಗುಮಾಸ್ತ (ಲೋಯರ್ ಡಿವಿಷನ್ ಕ್ಲರ್ಕ್)
ಒಟ್ಟು ಹುದ್ದೆಗಳು - 24
ಕೆಲಸದ ಸ್ಥಳ - ಬೆಂಗಳೂರು

ಗುಮಾಸ್ತ ಹುದ್ದೆಗಳನ್ನು ಭರ್ತಿ ಮಾಡಲು ವೆಬ್ ಸೈಟ್‌ನಲ್ಲಿ ಅಧಿಸೂಚನೆ ಹೊರಡಿಸಿದೆ. ಉದ್ಯೋಗದ ಸ್ಥಳ ಬೆಂಗಳೂರು ಆಗಿದ್ದು, ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ 27 ವರ್ಷಗಳು. 31/01/2018ಕ್ಕೆ ಅನ್ವಯವಾಗುವಂತೆ.
ವೇತನ: ರೂ.21,000/- ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು. ಇಂಗ್ಲಿಷ್‌ನಲ್ಲಿ 35WPM ಅಥವ ಹಿಂದಿಯಲ್ಲಿ 30 WPM ಟೈಪ್ ಮಾಡಬೇಕು.
ಅರ್ಜಿ ಸಲ್ಲಿಕೆ
ಆನ್ಲೈನ್ ಮೂಲಕ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ನಿಗದಿತ ದಿನಾಂಕದೊಳಗೆ ಕಚೇರಿ ವಿಳಾಸಕ್ಕೆ ಕಳುಹಿಸತಕ್ಕದ್ದು.
ಅರ್ಜಿ ಶುಲ್ಕ
- ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.500/-
- ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ರೂ.250/-
ಅರ್ಜಿ ಸಲ್ಲಿಸಲು ಕೊನೆ ದಿನಾಂಕ - ಜನವರಿ 31,2018
ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ


Click it and Unblock the Notifications











