ನಿಮಾನ್ಸ್ ನೇಮಕಾತಿ 17 ಸೈಂಟಿಸ್ಟ್ ಸಿ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅರ್ಜಿ ಸಲ್ಲಿಸಲು ಜೂನ್ 29 ಕೊನೆಯ ದಿನವಾಗಿರುತ್ತದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
CRITERIA | DETAILS |
Name Of The Posts | ಸೈಂಟಿಸ್ಟ್ ಸಿ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ |
Organisation | ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ |
Educational Qualification | ಎಂ.ಡಿ ,ಪಿಹೆಚ್ಡಿ, ಬಿ.ಟೆಕ್,ಎಂ.ಫಿಲ್,ಎಂಬಿಬಿಎಸ್,ಎಂಎಸ್ಸಿ,ಬಿಎಎಂಎಸ್,ಬಿಎಸ್ಸಿ,ಪದವಿ,ಹತ್ತನೇ ತರಗತಿ ಮತ್ತು ಎಂಸಿಎ |
Job Location | ಬೆಂಗಳೂರು (ಕರ್ನಾಟಕ) |
Salary Scale | ಹುದ್ದೆಗಳಿಗನುಸಾರ ವೇತನ |
Application Start Date | May 17, 2019 |
Application End Date | June 29, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಎಂ.ಡಿ ,ಪಿಹೆಚ್ಡಿ, ಬಿ.ಟೆಕ್,ಎಂ.ಫಿಲ್,ಎಂಬಿಬಿಎಸ್,ಎಂಎಸ್ಸಿ,ಬಿಎಎಂಎಸ್,ಬಿಎಸ್ಸಿ,ಪದವಿ,ಹತ್ತನೇ ತರಗತಿ ಮತ್ತು ಎಂಸಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ಅಧಿಸೂಚನೆಯಲ್ಲಿ ಕೇಳಲಾಗಿರುವ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 2360/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು 1180/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಮಾನ್ಸ್ ನ ಅಧಿಕೃತ ವೆಬ್ಸೈಟ್ http://www.nimhans.ac.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಅಧಿಕೃತ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜೂನ್ 29,2019 ರೊಳಗೆ ಅರ್ಜಿಯನ್ನು ಪೋಸ್ಟ್ ಮೂಲಕ ಕಳುಹಿಸಬಹುದು.
ಕಚೇರಿಯ ವಿಳಾಸ:
ನಿರ್ದೇಶಕರು,
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ,
ಪಿ.ಬಿ.ನಂ.2900, ಹೊಸೂರ್ ರೋಡ್,
ಬೆಂಗಳೂರು-560029
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ