ನಿಮಾನ್ಸ್ ನೇಮಕಾತಿ: 2 ಯೋಗ ಥೆರಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಿಮಾನ್ಸ್ ನಲ್ಲಿ 2 ಯೋಗ ಥೆರಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನವೆಂಬರ್ 25,2019ರೊಳಗೆ ಕಚೇರಿಯ ವಿಳಾಸಕ್ಕೆ ತಲುಪಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ನಿಮಾನ್ಸ್‌ನಲ್ಲಿ ಉದ್ಯೋಗಾವಕಾಶ..ನ.25ರೊಳಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಯೋಗ ಥೆರಪಿಸ್ಟ್
Organisation ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
Educational Qualification ಬಿ.ಎಸ್ಸಿ
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 29,300/-ರೂ
Application Start Date November 5, 2019
Application End Date November 25, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿ.ಎಸ್ಸಿ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,300/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 590/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು 295/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಮಾನ್ಸ್‌ ನ ಅಧಿಕೃತ ವೆಬ್‌ಸೈಟ್‌ http://www.nimhans.ac.in/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ನವೆಂಬರ್ 25,2019ರ ಸಂಜೆ 4:30ರೊಳಗೆ ಅರ್ಜಿಯನ್ನು ಪೋಸ್ಟ್ ಮೂಲಕ ಕಳುಹಿಸಬಹುದು.

ಕಚೇರಿಯ ವಿಳಾಸ:
ದಿ ರಿಜಿಸ್ಟ್ರಾರ್,
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ,
ಪಿ.ಬಿ.ನಂ.2900, ಹೊಸೂರ್‌ ರೋಡ್,
ಬೆಂಗಳೂರು-560029.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
NIMHANS recruitment 2019 notification has been released on official website for the recruitment of 2 yoga therapist posts. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X