ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿ 28 ಸಹಾಯಕ ಪ್ರಾಧ್ಯಾಪಕ , ಹಿರಿಯ ವೈಜ್ಞಾನಿಕ ಅಧಿಕಾರಿ, ಡ್ಯುಟಿ ವೈದ್ಯಕೀಯ ಅಧಿಕಾರಿ, ಸೈಕಿಯಾಟ್ರಿಕ್ ಸಮಾಜ ಕಾರ್ಯಕರ್ತ, ಕ್ಲಿನಿಕಲ್ ಸೈಕಾಲಜಿಸ್ಟ್, ಕಿರಿಯ ವೈಜ್ಞಾನಿಕ ಅಧಿಕಾರಿ, ಇಲಾಖೆಯ ಕಾರ್ಯದರ್ಶಿ, ತಾಂತ್ರಿಕ ಸಹಾಯಕ ಮತ್ತು ಸಾಮಾಜಿಕ ಕಾರ್ಯಕರ್ತ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 25,2019 ರೊಳಗೆ ಅರ್ಜಿಯನ್ನು ಕಳುಹಿಸಬಹುದು.

| CRITERIA | DETAILS |
| Name Of The Posts | ಸಹಾಯಕ ಪ್ರಾಧ್ಯಾಪಕ , ಹಿರಿಯ ವೈಜ್ಞಾನಿಕ ಅಧಿಕಾರಿ, ಡ್ಯುಟಿ ವೈದ್ಯಕೀಯ ಅಧಿಕಾರಿ, ಸೈಕಿಯಾಟ್ರಿಕ್ ಸಮಾಜ ಕಾರ್ಯಕರ್ತ, ಕ್ಲಿನಿಕಲ್ ಸೈಕಾಲಜಿಸ್ಟ್, ಕಿರಿಯ ವೈಜ್ಞಾನಿಕ ಅಧಿಕಾರಿ, ಇಲಾಖೆಯ ಕಾರ್ಯದರ್ಶಿ, ತಾಂತ್ರಿಕ ಸಹಾಯಕ ಮತ್ತು ಸಾಮಾಜಿಕ ಕಾರ್ಯಕರ್ತ |
| Organisation | ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ |
| Educational Qualification | ಎಂ.ಡಿ, ಪಿಹೆಚ್.ಡಿ, ಎಂಬಿಬಿಎಸ್,ಸ್ನಾತಕೋತ್ತರ ಪದವಿ, ಎಂ.ಫಿಲ್,ಎಂ.ಎ, ಎಂ.ಎಸ್ಸಿ, ಪಿಯುಸಿ, ಡಿಪ್ಲೋಮ / ಬಿ.ಎಸ್ಸಿ, ಎಂಎಸ್‌ಡಬ್ಲ್ಯೂ |
| Job Location | ಬೆಂಗಳೂರು (ಕರ್ನಾಟಕ) |
| Salary Scale | 23,000/- ರಿಂದ 1,12,400/-ರೂ |
| Application Start Date | May 3, 2019 |
| Application End Date | May 25, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಹುದ್ದೆಗಳಿಗನುಸಾರ ಎಂ.ಡಿ, ಪಿಹೆಚ್.ಡಿ, ಎಂಬಿಬಿಎಸ್,ಸ್ನಾತಕೋತ್ತರ ಪದವಿ, ಎಂ.ಫಿಲ್,ಎಂ.ಎ, ಎಂ.ಎಸ್ಸಿ, ಪಿಯುಸಿ ಮತ್ತು ಡಿಪ್ಲೋಮ / ಬಿ.ಎಸ್ಸಿ, ಎಂಎಸ್‌ಡಬ್ಲ್ಯೂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿಯ ಬಗೆಗೆ ಹೆಚ್ಚು ತಿಳಿಯಲು ಅಧಿಸೂಚನೆಯನ್ನು ಓದಬಹುದು.
ವೇತನದ ವಿವರ:
ಹುದ್ದೆಗಳಿಗನುಸಾರ 23,000/- ರಿಂದ 1,12,400/-ರೂ ವೇತನವನ್ನು ಪಡೆಯಬಹುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ ಅಭ್ಯರ್ಥಿಗಳು 590/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 285/-ರೂ ಅನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಮಾನ್ಸ್ ಅಧಿಕೃತ ವೆಬ್‌ಸೈಟ್ http://www.nimhans.ac.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 25,2019 ರೊಳಗೆ ಅರ್ಜಿಯನ್ನು ಕಳುಹಿಸಬಹುದು.
ಕಚೇರಿಯ ವಿಳಾಸ:
ದಿ ರಿಜಿಸ್ಟ್ರಾರ್,
ನಿಮಾನ್ಸ್, ಪಿ.ಬಿ.ನಂ.2900,
ಹೊಸೂರ್ ರೋಡ್,
ಬೆಂಗಳೂರು-560029
ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











