ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ 2 ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ವಿದ್ಯಾರ್ಹತೆ, ವಯೋಮಿತಿ ಮತ್ತು ಇತರೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
ಹುದ್ದೆಗಳಿಗೆ ಸಂಬಂಧಪಟ್ಟ ವಿಷಯದಲ್ಲಿ ಎಂ.ಫಿಲ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ:
ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ತಮ್ಮ ರೆಸ್ಯುಮೆಯನ್ನು [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಡಿಸೆಂಬರ್ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











