NIMHANS Recruitment 2020: ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ 4 ಮೀಡಿಯಾ ಅಧಿಕಾರಿ, ಪ್ರಾಜೆಕ್ಟ್ ಅಧಿಕಾರಿ ಮತ್ತು ಐಟಿ ಮೇಂಟೆನೆನ್ಸ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ವಿದ್ಯಾರ್ಹತೆ, ವಯೋಮಿತಿ ಮತ್ತು ಇತರೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಾವಕಾಶ

 

ವಿದ್ಯಾರ್ಹತೆ:

ಪದವಿ, ಸ್ನಾತಕೋತ್ತರ ಪದವಿ, ಬಿ.ಇ/ಬಿ.ಟೆಕ್ ಮತ್ತು ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಮೀಡಿಯಾ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 35 ವರ್ಷ, ಪ್ರಾಜೆಕ್ಟ್ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 32 ವರ್ಷ ಮತ್ತು ಐಟಿ ಮೇಂಟೆನೆನ್ಸ್ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಮೀಡಿಯಾ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ, ಪ್ರಾಜೆಕ್ಟ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 90,000/-ರೂ ಮತ್ತು ಐಟಿ ಮೇಂಟೆನೆನ್ಸ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 45,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ ಅಧಿಕೃತ ವೆಬ್‌ಸೈಟ್ https://nimhans.ac.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
NIMHANS recruitment 2020 notification has been released for 4 project officer, media officer and IT maintenance officer posts. Interested candidates can apply through online before December 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X