NIMHANS Recruitment 2021: 275 ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ 275 ಹುದ್ದೆಗಳ ನೇಮಕಾತಿ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ 275 ಗ್ರೂಪ್ ಎ ಮತ್ತು ಬಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಖಾಲಿ ಹುದ್ದೆಗಳ ವಿವರ:

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ 275 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಪಿಹೆಚ್.ಡಿ, ಪೋಸ್ಟ್ ಗ್ರಾಜುಯೇಟ್, ಎಂ.ಡಿ, ಎಂಬಿಬಿಎಸ್, ಬಿ.ಎಸ್ಸಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಬಿ.ಎ, ಬಿ.ಎಸ್ಸಿ, ಬಿ.ಎಡ್ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಹಾಕಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಜೂನ್ 28,2021ರ ಅನ್ವಯ ಗರಿಷ್ಟ 30 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 35,400/- ರಿಂದ 2,08,700/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಗ್ರೂಪ್ ಎ ಹುದ್ದೆಗಳಿಗೆ ಅರ್ಜಿದಾರರು 2360/-ರೂ ಮತ್ತು ಪ.ಜಾ/ಪ,ಪಂ ಅಭ್ಯರ್ಥಿಗಳು 1180/-ರೂ ಅರ್ಜಿ ಶುಲ್ಕ, ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿದಾರರು 1180/-ರೂ ಮತ್ತು ಪ.ಜಾ/ಪ.ಪಂ ಅಭ್ಯರ್ಥಿಗಳು 885/-ರೂ ಅರ್ಜಿ ಶುಲ್ಕವನ್ನು ಎಸ್‌ಬಿ ಕಲೆಕ್ಟ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://nimhans.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜೂನ್ 28,2021ರ ಸಂಜೆ 4:30ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
ನಿರ್ದೇಶಕರು,
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ,
ಪಿ.ಬಿ.ನಂ.2900,
ಹೊಸೂರು ರಸ್ತೆ,
ಬೆಂಗಳೂರು-560029.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
NIMHANS recruitment 2021 notification has been released for 275 group A and B posts. Interested candidates can apply before june 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X