ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಓಎಸ್) ನೇಮಕಾತಿ 90 ಜ್ಯೂನಿಯರ್ ಅಸಿಸ್ಟೆಂಟ್ ಮತ್ತು ಅಕಾಡೆಮಿಕ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 17,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

| CRITERIA | DETAILS |
| Name Of The Posts | ಜ್ಯೂನಿಯರ್ ಅಸಿಸ್ಟೆಂಟ್ ಮತ್ತು ಅಕಾಡೆಮಿಕ್ ಆಫೀಸರ್ |
| Organisation | ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಓಎಸ್) |
| Educational Qualification | ಸ್ನಾತಕೋತ್ತರ ಪದವಿ, ಪದವಿ , 10ನೇ ತರಗತಿ , ಪಿಯುಸಿ |
| Job Location | ಭಾರತದೆಲ್ಲೆಡೆ |
| Salary Scale | ಡೈರೆಕ್ಟರ್ ಹುದ್ದೆಗಳಿಗೆ - 1,23,100/- ರಿಂಧ 2,15,900/-ರೂ, ಡೆಪ್ಯುಟಿ ಡೈರೆಕ್ಟರ್ (ಅಕಾಡೆಮಿಕ್) ಮತ್ತು ಡೆಪ್ಯುಟಿ ಡೈರೆಕ್ಟರ್ (ಅಕೌಂಟ್ಸ್ ) - ತಿಂಗಳಿಗೆ 78,800/- ರಿಂದ 2,09,200/-ರೂ, ಅಕಾಡೆಮಿಕ್ ಆಫೀಸರ್ - ತಿಂಗಳಿಗೆ 56,100/- ರಿಂದ 1,77,500/-ರೂ, ಅಸಿಸ್ಟೆಂಟ್ ಆಡಿಟ್ ಆಫೀಸರ್ -ತಿಂಗಳಿಗೆ 44,900/- ರಿಂದ 1,42,400/-ರೂ, ಇಡಿಪಿ ಸೂಪರ್‌ವೈಸರ್ - ತಿಂಗಳಿಗೆ 35,400/- ರಿಂದ 1,12,400/- ರೂ ಮತ್ತು ಜ್ಯೂನಿಯರ್ ಅಸಿಸ್ಟೆಂಟ್ -ತಿಂಗಳಿಗೆ 19,900/- ರಿಂದ 63,200/-ರೂ |
| Application Start Date | April 17, 2019 |
| Application End Date | May 17, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಪದವಿ , 10ನೇ ತರಗತಿ ಮತ್ತು ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಡೈರೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,23,100/- ರಿಂಧ 2,15,900/-ರೂ, ಡೆಪ್ಯುಟಿ ಡೈರೆಕ್ಟರ್ (ಅಕಾಡೆಮಿಕ್) ಮತ್ತು ಡೆಪ್ಯುಟಿ ಡೈರೆಕ್ಟರ್ (ಅಕೌಂಟ್ಸ್ ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 78,800/- ರಿಂದ 2,09,200/-ರೂ, ಅಕಾಡೆಮಿಕ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 1,77,500/-ರೂ, ಅಸಿಸ್ಟೆಂಟ್ ಆಡಿಟ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,900/- ರಿಂದ 1,42,400/-ರೂ, ಇಡಿಪಿ ಸೂಪರ್‌ವೈಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400/- ರಿಂದ 1,12,400/- ರೂ ಮತ್ತು ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/- ರಿಂದ 63,200/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು
ಅರ್ಜಿ ಶುಲ್ಕ:
ಗ್ರೂಪ್ 'A' (ಮೀಸಲಾತಿ ಮತ್ತು ಓಬಿಸಿ)ಅಭ್ಯರ್ಥಿಗಳು 500/- ರೂ, ಗ್ರೂಪ್ 'B' (ಮೀಸಲಾತಿ ಮತ್ತು ಓಬಿಸಿ) ಅಭ್ಯರ್ಥಿಗಳು 500/-ರೂ, ಗ್ರೂಪ್ 'C' ( ಮೀಸಲಾತಿ ಮತ್ತು ಓಬಿಸಿ) ಅಭ್ಯರ್ಥಿಗಳು 500/- ರೂ, ಗ್ರೂಪ್ 'A'(ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ) ಅಭ್ಯರ್ಥಿಗಳು 250/-ರೂ, ಗ್ರೂಪ್ 'B' (ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ) ಅಭ್ಯರ್ಥಿಗಳು 250/- ರೂ ಮತ್ತು ಗ್ರೂಪ್ 'C' (ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ) ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://www.nios.ac.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಿ ಮತ್ತು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 17,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications