NIOS Recruitment 2021 : 112 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎನ್‌ಐಓಎಸ್ ನಲ್ಲಿ 112 ಹುದ್ದೆಗಳ ನೇಮಕಾತಿ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಓಎಸ್) 112 ನಿರ್ದೇಶಕರು, ಅಧಿಕಾರಿಗಳು, ಇಂಜಿನಿಯರ್, ಮೇಲ್ವಿಚಾರಕ, ಸ್ಟೆನೋಗ್ರಾಫರ್ ಮತ್ತು ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗೆ ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ವಿದ್ಯಾರ್ಹತೆ:

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಓಎಸ್) ನೇಮಕಾತಿಯ ವಿವಿಧ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಪದವಿ, ಡಾಕ್ಟರೇಟ್, ಎಂ.ಫಿಲ್, ಪಿಹೆಚ್.ಡಿ, ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ವಯೋಮಿತಿ:

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಓಎಸ್) ನೇಮಕಾತಿಯ ವಿವಿಧ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ವೇತನ:

ನಿರ್ದೇಶಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 67,700/- ರಿಂದ 2,15,900/-ರೂಗಳ ವರೆಗೆ, ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,900/- ರಿಂದ 2,08,700/-ರೂ , ಮೇಲ್ವಿಚಾರಕ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400/- ರಿಂದ 1,12,000/-ರೂ, ಸಹಾಯಕ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/- ರಿಂದ 81,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಓಎಸ್) ನೇಮಕಾತಿಯ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಓಎಸ್) ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಗ್ರೂಪ್ ಎ ಅಭ್ಯರ್ಥಿಗಳು 750/-ರೂ, ಗ್ರೂಪ್ ಬಿ ಮತ್ತು ಸಿ ಅಭ್ಯರ್ಥಿಗಳು 500/-ರೂ, ಗ್ರೂಪ್ ಎ ಮತ್ತು ಬಿ ಅಭ್ಯರ್ಥಿಗಳು 250/-ರೂ ಮತ್ತು ಗ್ರೂಪ್ ಸಿ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://nios.ac.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸುವುದು ಕಡ್ಡಾಯವಾಗಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NIOS recruitment 2021 notification has been released for 112 director, engineer, officer, stenographer and assistant posts. Interested candidates can apply before October 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+