ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ರಾಷ್ಟ್ರೀಯ ಸಂಸ್ಥೆ(NIRDPR)ಯಲ್ಲಿ 510 ಯಂಗ್ ಫೆಲೋ, ರಿಸೋರ್ಸ್ ಪರ್ಸನ್ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:
ಸ್ಟೇಟ್ ಪ್ರೋಗ್ರಾಮ್ ಕೋ-ಆರ್ಡಿನೇಟರ್ 10 ಹುದ್ದೆಗಳು
ಯಂಗ್ ಫೆಲೋ 250 ಹುದ್ದೆಗಳು
ಕ್ಲಸ್ಟರ್ ಲೆವೆಲ್ ರಿಸೋರ್ಸ್ ಪರ್ಸನ್ 250 ಹುದ್ದೆಗಳು
ಒಟ್ಟು 510 ಹುದ್ದೆಗಳು
ವಿದ್ಯಾರ್ಹತೆ:
ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ 25 ರಿಂದ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ರಾಷ್ಟ್ರೀಯ ಸಂಸ್ಥೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,500/-ರಿಂದ 55,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: ಜುಲೈ 25,2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 10,2020
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಅರ್ಜಿದಾರರು ಆನ್‌ಲೈನ್ ನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ರಾಷ್ಟ್ರೀಯ ಸಂಸ್ಥೆ ಯ ಅಧಿಕೃತ ವೆಬ್‌ಸೈಟ್ http://nirdpr.org.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.