ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ, ಸುರತ್ಕಲ್ 2 ಜ್ಯೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್) ಮತ್ತು ಫೀಲ್ಡ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.
ಅರ್ಹ ಅಭ್ಯರ್ಥಿಗಳು ನವೆಂಬರ್ 10,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ:
ಬಿ.ಇ/ಬಿ.ಟೆಕ್ ಮತ್ತು ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿ) ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
ವೇತನದ ವಿವರ:
ಜ್ಯೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,000/-ರೂ ಮತ್ತು ಫೀಲ್ಡ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಸಂದರ್ಶನದ ವಿವರ:
ಅಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ದಿನಾಂಕ ಮತ್ತು ಸಮಯ: ನವೆಂಬರ್ 10,2020ರಂದು ಬೆಳಿಗ್ಗೆ 9 ಗಂಟೆಗೆ
ಸಂದರ್ಶನ ನಡೆಯುವ ಸ್ಥಳ:
ಸೆಂಟರ್ ಫಾರ್ ಸಿಸ್ಟಂ ಡಿಸೈನ್,
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್‌ಐಟಿಕೆ),
ಸುರತ್ಕಲ್,
ಮಂಗಳೂರು-575025
ಅಧಿಕೃತ ವೆಬ್‌ಸೈಟ್: https://www.nitk.ac.in/
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











