ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ, ಸುರತ್ಕಲ್ ಜ್ಯೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್) ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.
ಅರ್ಹ ಅಭ್ಯರ್ಥಿಗಳು ನವೆಂಬರ್ 30,2020ರೊಳಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹತೆ:
ಬಿ.ಇ/ಬಿ.ಟೆಕ್, ಎಂಇ/ಎಂ.ಟೆಕ್, ಎಂಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಜ್ಯೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ತಮ್ಮ ರೆಸ್ಯುಮೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ನವೆಂಬರ್ 30,2020ರೊಳಗೆ ಕಳುಹಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅಧಿಕೃತ ವೆಬ್‌ಸೈಟ್: https://www.nitk.ac.in/
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











