ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ, ಸುರತ್ಕಲ್ (ಎನ್ಐಟಿ ಕರ್ನಾಟಕ) ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ನೇಮಕಾತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನ:
ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜನವರಿ 23,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ನಂತರ ಅರ್ಜಿಯ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜನವರಿ 23,2021ರೊಳಗೆ ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
Dr, Sandeep kumar,
principal investigator and assistant professor ,
E & C engineering department,
NITK Surathkal,
Mangalore-575025,
India.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ https://www.nitk.ac.in/ ಗೆ ಭೇಟಿ ನೀಡಿ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.