ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯು ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ನವೆಂಬರ್ 1,2019ರಂದು ನೇರ ಸಂದರ್ಶನ ನಡೆಸುತ್ತಿದೆ. ಬಿ.ಟೆಕ್ ಮತ್ತು ಎಂಬಿಎ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಸಂದರ್ಶದಲ್ಲಿ ಪಾಲ್ಗೊಳ್ಳಲು ಅರ್ಹರು. ನೇಮಕಾತಿಯ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.
CRITERIA | DETAILS |
Name Of The Posts | ಸೀನಿಯರ್ ರಿಸರ್ಚ್ ಫೆಲೋ |
Organisation | ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿ) |
Educational Qualification | ಬಿ.ಟೆಕ್ ಮತ್ತು ಎಂಬಿಎ |
Job Location | ಸುರತ್ಕಲ್ (ಕರ್ನಾಟಕ) |
Salary Scale | ತಿಂಗಳಿಗೆ 18,000/-ರೂ |
Application Start Date | October 10, 2019 |
Application End Date | November 1, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಬಿ.ಟೆಕ್ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಪೂರೈಸಿರಬೇಕು.
ವಯೋಮಿತಿ:
ಎನ್‌ಐಟಿ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.
ವೇತನದ ವಿವರ:
ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಸಂದರ್ಶನದ ವಿವರ:
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಆಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸುರತ್ಕಲ್‌ನ ಕಚೇರಿಯಲ್ಲಿ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.
ಸಂದರ್ಶನ ದಿನಾಂಕ ಮತ್ತು ಸಮಯ: ನವೆಂಬರ್ 1,2019ರಂದು ಬೆಳಿಗ್ಗೆ 9 ಗಂಟೆಗೆ
ಅಧಿಕೃತ ವೆಬ್‌ಸೈಟ್: https://www.nitk.ac.in/
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ