ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್‌ಐಟಿ ಕರ್ನಾಟಕ) ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ವಿವರ ಇಲ್ಲಿದೆ.

ವಿದ್ಯಾರ್ಹತೆ:
ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನ:
ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/- ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಮತ್ತು ಅರ್ಜಿಯ ಪ್ರತಿಯನ್ನು ಕಚೇರಿಗೆ ತಲುಪಿಸುವ ಮೂಲಕ ಫೆಬ್ರವರಿ 20,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಅಭ್ಯರ್ಥಿಗಳು ಎನ್‌ಐಟಿ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











