NIUM Recruitment 2019: 17 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್ ವಿವಿಧ 17 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಜನವರಿ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಎನ್‌ಐಯುಎಂ ನಲ್ಲಿ 17 ಹುದ್ದೆಗಳ ನೇಮಕಾತಿ..ಜ.20ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಪ್ರಾಧ್ಯಾಪಕ, ರೀಡರ್,ಜಂಟಿ ನಿರ್ದೇಶಕರು, ರೇಡಿಯಾಲಜಿಸ್ಟ್, ಅರಿವಳಿಕೆ ತಜ್ಞ, ಜೈವಿಕ ಶಾಸ್ತ್ರಜ್ಞ, ಸಹಾಯಕ ಲೈಬ್ರರಿಯನ್,ಸಿಸ್ಟಂ ಅಡ್ಮಿನಿಸ್ಟ್ರೇಟರ್, ಫಿಸಿಯೋಥೆರಪಿಸ್ಟ್,ಟೆಕ್ನೀಶಿಯನ್ ಇಲೆಕ್ಟ್ರೀಶಿಯನ್, ಕಿರಿಯ ಗ್ರಂಥಾಲಯ ಸಹಾಯಕ, ಫಾರ್ಮೆಸಿ ಅಸಿಸ್ಟೆಂಟ್,
Organisation ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್
Educational Qualification ಪೋಸ್ಟ್ ಗ್ರಾಜುಯೇಟ್ ಪದವಿ, ಪದವಿ,ಎಂ.ಡಿ, ಎಂಬಿಬಿಎಸ್, ಎಂ.ಎಸ್ಸಿ, ಡಿಪ್ಲೋಮಾ, ಇಂಟರ್‌ ಮೀಡಿಯೇಟ್ ಅಥವಾ ತತ್ಸಮಾನ
Job Location ಬೆಂಗಳೂರು (ಕರ್ನಾಟಕ)
Salary Scale ಹುದ್ದೆಗಳಿಗನುಸಾರ ವೇತನ
Application Start Date December 21, 2019
Application End Date January 20, 2020

ಶೈಕ್ಷಣಿಕ ವಿದ್ಯಾರ್ಹತೆ:

ಪೋಸ್ಟ್ ಗ್ರಾಜುಯೇಟ್ ಪದವಿ, ಪದವಿ,ಎಂ.ಡಿ, ಎಂಬಿಬಿಎಸ್, ಎಂ.ಎಸ್ಸಿ, ಡಿಪ್ಲೋಮಾ, ಇಂಟರ್‌ ಮೀಡಿಯೇಟ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ವಯೋಮಿತಿ ಮತ್ತು ವಯೋಮಿತಿ ಸಡಿಲಿಕೆ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ವೇತನದ ವಿವರ:

ಪ್ರಾಧ್ಯಾಪಕ ಹುದ್ದೆಗಳಿಗೆ ತಿಂಗಳಿಗೆ 1,23,100/- ರಿಂದ 2,15,900/-ರೂ, ರೀಡರ್ ಮತ್ತು ಜಂಟಿ ನಿರ್ದೇಶಕರು ಹುದ್ದೆಗಳಿಗೆ ತಿಂಗಳಿಗೆ 78,800/-ರಿಂದ 2,09,200/-ರೂ,ರೇಡಿಯಾಲಜಿಸ್ಟ್, ಅರಿವಳಿಕೆ ತಜ್ಞ ಮತ್ತು ಜೈವಿಕ ಶಾಸ್ತ್ರಜ್ಞ ಹುದ್ದೆಗಳಿಗೆ ತಿಂಗಳಿಗೆ 56,100/- ರಿಂದ 1,77,500/-ರೂ, ಸಹಾಯಕ ಲೈಬ್ರರಿಯನ್,ಸಿಸ್ಟಂ ಅಡ್ಮಿನಿಸ್ಟ್ರೇಟರ್ ಮತ್ತು ಫಿಸಿಯೋಥೆರಪಿಸ್ಟ್ ಹುದ್ದೆಗಳಿಗೆ ತಿಂಗಳಿಗೆ 35,400/-ರಿಂದ 1,12,400/-ರೂ, ಟೆಕ್ನೀಶಿಯನ್ ಹುದ್ದೆಗಳಿಗೆ ತಿಂಗಳಿಗೆ 29,200/-ರಿಂದ 92,300/-ರೂ, ಇಲೆಕ್ಟ್ರೀಶಿಯನ್ ಹುದ್ದೆಗಳಿಗೆ ತಿಂಗಳಿಗೆ 25,500/- ರಿಂದ 81,100/-ರೂ, ಕಿರಿಯ ಗ್ರಂಥಾಲಯ ಸಹಾಯಕ ಮತ್ತು ಫಾರ್ಮೆಸಿ ಅಸಿಸ್ಟೆಂಟ್ ಹುದ್ದೆಗಳಿಗೆ ತಿಂಗಳಿಗೆ 19,900/-ರಿಂದ 63,200/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 2000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ ಅಭ್ಯರ್ಥಿಗಳು 1600/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ.
ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್‌ನ ಅಧಿಕೃತ ವೆಬ್‌ಸೈಟ್‌ http://nium.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಂತೆ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಛೇರಿಯ ವಿಳಾಸಕ್ಕೆ ಜನವರಿ 20,2020ರೊಳಗೆ ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
NIUM recruitment 2019 notification has been released on official website for the recruitment of 17 various posts. Interested candidates can apply before 20th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X