ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆ ಅಕ್ಟೋಬರ್ 4ಕ್ಕೆ ನೇರ ಸಂದರ್ಶನವನ್ನು ನಡೆಸುತ್ತಿದೆ. ಸಂಸ್ಥೆಯು ಪ್ರಾಜೆಕ್ಟ್ ಫೆಲೋ,ಸೀನಿಯರ್ ರಿಸರ್ಚ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಸಂದರ್ಶನವನ್ನು ನಡೆಸುತ್ತಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಪ್ರಾಜೆಕ್ಟ್ ಫೆಲೋ,ಸೀನಿಯರ್ ರಿಸರ್ಚ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್ |
| Organisation | ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆ |
| Educational Qualification | ಪಿ.ಹೆಚ್‌ಡಿ /ಎಂ.ವಿ.ಎಸ್ಸಿ, ಸ್ನಾತಕೋತ್ತರ ಪದವಿ,10+2 /ಪಿಯುಸಿ,ಡಿಪ್ಲೋಮಾ,ಬಿ.ಎಸ್ಸಿ |
| Job Location | ಬೆಂಗಳೂರು (ಕರ್ನಾಟಕ) |
| Salary Scale | ಪ್ರಾಜೆಕ್ಟ್ ಫೆಲೋ - ತಿಂಗಳಿಗೆ 45,000/-ರೂ, ಸೀನಿಯರ್ ರಿಸರ್ಚ್ ಫೆಲೋ -ತಿಂಗಳಿಗೆ 25,000/-ರೂ ,ಪ್ರಾಜೆಕ್ಟ್ ಟೆಕ್ನೀಶಿಯನ್-III - ತಿಂಗಳಿಗೆ 18,000/-ರೂ, ಪ್ರೊಫೆಷನಲ್-I - ತಿಂಗಳಿಗೆ 15,000/-ರೂ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ - ತಿಂಗಳಿಗೆ 12,000/-ರೂ |
| Application Start Date | September 13, 2019 |
| Application End Date | October 4, 2019 |
ವಿದ್ಯಾರ್ಹತೆ :
ಪ್ರಾಜೆಕ್ಟ್ ಫೆಲೋ ಹುದ್ದೆಗಳಿಗೆ ಪಿ.ಹೆಚ್‌ಡಿ ಅಥವಾ ಎಂ.ವಿ.ಎಸ್ಸಿ, ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಹುದ್ದೆಗಳಿಗೆ 10+2 /ಪಿಯುಸಿ,ಡಿಪ್ಲೋಮಾ ಅಥವಾ ಪದವಿ, ಪ್ರೊಫೆಷನಲ್-I ಹುದ್ದೆಗಳಿಗೆ ಬಿ.ಎಸ್ಸಿ ಅಥವಾ ಡಿಪ್ಲೋಮಾ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ 10+2/ ದ್ವಿತೀಯ ಪಿಯುಸಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
ವಯೋಮಿತಿ :
ಪ್ರಾಜೆಕ್ಟ್ ಫೆಲೋ ಹುದ್ದೆಗಳಿಗೆ ಗರಿಷ್ಟ 35 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಮತ್ತು 40 ವರ್ಷ ವಯೋಮಿತಿಯೊಳಗಿನ ಮಹಿಳಾ ಅಭ್ಯರ್ಥಿಗಳು, ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಪುರುಷ ಅಭ್ಯರ್ಥಿಗಳು ಮತ್ತು 40 ವರ್ಷ ವಯೋಮಿತಿಯೊಳಗಿನ ಮಹಿಳಾ ಅಭ್ಯರ್ಥಿಗಳು, ಪ್ರಾಜೆಕ್ಟ್ ಟೆಕ್ನೀಶಿಯನ್-III ಹುದ್ದೆಗಳಿಗೆ
ಗರಿಷ್ಟ 30 ವರ್ಷ, ಪ್ರೊಫೆಷನಲ್-I ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 45 ವರ್ಷ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.
ವೇತನದ ವಿವರ :
ಪ್ರಾಜೆಕ್ಟ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಆಭ್ಯರ್ಥಿಗಳಿಗೆ ತಿಂಗಳಿಗೆ 45,000/-ರೂ, ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ,ಪ್ರಾಜೆಕ್ಟ್ ಟೆಕ್ನೀಶಿಯನ್-III ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ, ಪ್ರೊಫೆಷನಲ್-I ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರೂ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ :
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ :
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಸಂದರ್ಶನದ ವಿವರ :
ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 4,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ :
ಭಾ.ಕೃ.ಅ.ಪ ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆ,
ಯಲಹಂಕ,
ಬೆಂಗಳೂರು-560064
ಅಭ್ಯರ್ಥಿಗಳು ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











