NIVEDI Recruitment 2020: ಯಂಗ್ ಪ್ರೊಫೆಷನಲ್ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ಭಾ.ಕೃ.ಅ.ಪ ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆ 3 ಜ್ಯೂನಿಯರ್ ರಿಸರ್ಚ್ ಫೆಲೋ, 2 ಸೀನಿಯರ್ ರಿಸರ್ಚ್ ಫೆಲೋ, 1 ಯಂಗ್ ಪ್ರೊಫೆಷನಲ್ II ಮತ್ತು 1 ಲ್ಯಾಬೋರೇಟರಿ ಅಸಿಸ್ಟೆಂಟ್ I ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಹತೆ:

ವಿದ್ಯಾರ್ಹತೆ:

ಸ್ನಾತಕೋತ್ತರ ಪದವಿ, ಎಂ.ಎಸ್ಸಿ, ಪಿಹೆಚ್.ಡಿ, ಬಿ.ಇ/ಬಿ.ಟೆಕ್, ಡಿಪ್ಲೋಮಾ, ಗ್ರಾಜುಯೇಟ್ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ವಯೋಮಿತಿ:

ಜ್ಯೂನಿಯರ್ ರಿಸರ್ಚ್ ಫೆಲೋ ಮತ್ತು ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪುರುಷ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಗರಿಷ್ಟ 40 ವಯೋಮಿತಿಯೊಳಗಿನವರಾಗಿರಬೇಕು. ಯಂಗ್ ಪ್ರೊಫೆಷನಲ್ ಮತ್ತು ಲ್ಯಾಬೋರೇಟರಿ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 21 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನವರಾಗಿರಬೇಕು.

ವೇತನ:

ವೇತನ:

ಜ್ಯೂನಿಯರ್ ರಿಸರ್ಚ್ ಫೆಲೋ (ಜೆಆರ್ಎಫ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/-ರೂ, ಸೀನಿಯರ್ ರಿಸರ್ಚ್ ಫೆಲೋ (ಎಸ್‌ಆರ್ಎಫ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ, ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ಮತ್ತು ಲ್ಯಾಬೋರೇಟರಿ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಶುಲ್ಕ:

ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಶುಲ್ಕ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ನವೆಂಬರ್ 8,2020ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
NIVEDI recruitment 2020 notification has been released for 7 jrf, srf and young professional posts. Interested candidates can apply before November 8.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X