ಭಾ.ಕೃ.ಅ.ಪ-ರಾಷ್ಟ್ರೀಯ ಪಶುರೋಗ ಸೋಂಕುಶಾಸ್ತ್ರ ಮತ್ತು ಮಾಹಿತಿ ವಿಜ್ಞಾನ ಸಂಸ್ಥೆ 7 ಯಂಗ್ ಪ್ರೊಫೆಷನಲ್, ಸೀನಿಯರ್ ರಿಸರ್ಚ್ ಫೆಲೋ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಮಾರ್ಚ್ 11,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಪದವಿ, ಪೋಸ್ಟ್ ಗ್ರಾಜುಯೇಟ್, ಸ್ನಾತಕೋತ್ತರ ಪದವಿ, ಎಂ.ಟೆಕ್, ಎಂಸಿಎ, ಬಿ.ಕಾಂ, ಬಿಬಿಎ, ಬಿಬಿಎಸ್, ಎನ್ಇಟಿ, ಗೇಟ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ರಿಸರ್ಚ್ ಫೆಲೋ ಹುದ್ದೆಗಳಿಗೆ 31,000/- ರಿಂದ 35,000/-ರೂ ಮತ್ತು ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ 25,000/- ರಿಂದ 35,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://www.nivedi.res.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 11,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.