ನೈವೇಲಿ ಲಿಗ್‌ನೈಟ್ ಕಾರ್ಪೋರೇಶನ್ ಲಿಮಟೆಡ್ (ಎನ್‌ಎಲ್‌ಸಿ) ನಲ್ಲಿ ವಿವಿಧ 675 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 25ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಐಟಿಐ, ಬಿ.ಕಾಂ, ಬಿ.ಎಸ್ಸಿ, ಬಿಸಿಎ ಮತ್ತು ಬಿಬಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,766/-ರಿಂದ 12,524/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://nlcindia.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 25ರೊಳಗೆ ಅರ್ಜಿಯನ್ನು ಹಾಕಬಹುದು. ತದನಂತರ ಅರ್ಜಿಯ ಪ್ರಿಂಟೌಟ್ ಅನ್ನು ಕಚೇರಿಗೆ ಆಗಸ್ಟ್ 30,2021ರೊಳಗೆ ತಲುಪಿಸಬೇಕಿರುತ್ತದೆ. ಕಚೇರಿ ವಿಳಾಸವನ್ನು ಅಧಿಸೂಚನೆಯಲ್ಲಿ ಪಡೆಯಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











