ಉತ್ತರ ಮಧ್ಯ ರೈಲ್ವೆ ನೇಮಕಾತಿ 2019: 8 ಗ್ರೂಪ್ "ಸಿ" ಮತ್ತು "ಡಿ“ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉತ್ತರ ಮಧ್ಯ ರೈಲ್ವೆಯು ಒಟ್ಟು 8 ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸ್ಕೌಟ್ಸ್ ಮತ್ತು ಗೈಡ್ಸ್ ಕೋಟಾ ಹುದ್ದೆಗಳನ್ನು ಭರ್ತಿ ಮಾಡಲಿದ್ದು, ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 19,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ರೈಲ್ವೆ ಇಲಾಖೆಯಲ್ಲಿ  ಉದ್ಯೋಗಾವಕಾಶ

 

CRITERIA DETAILS
Name Of The Posts ಗ್ರೂಪ್ "ಸಿ" ಮತ್ತು ಗ್ರೂಪ್ "ಡಿ"
Organisation ಉತ್ತರ ಮಧ್ಯ ರೈಲ್ವೆ
Educational Qualification ಇಂಟರ್‌ಮೀಡಿಯೇಟ್,ಪದವಿ / ಪೋಸ್ಟ್ ಗ್ರಾಜುಯೇಶನ್,ಮೆಟ್ರಿಕ್ಯುಲೇಶನ್ / ಎಸ್‌.ಎಸ್‌.ಎಲ್‌.ಸಿ,ಐಟಿಐ
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ ವೇತನ
Application Start Date July 27, 2019
Application End Date August 19, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಟರ್‌ಮೀಡಿಯೇಟ್,ಪದವಿ / ಪೋಸ್ಟ್ ಗ್ರಾಜುಯೇಶನ್,ಮೆಟ್ರಿಕ್ಯುಲೇಶನ್ / ಎಸ್‌.ಎಸ್‌.ಎಲ್‌.ಸಿ ಮತ್ತು ಐಟಿಐ ಅನ್ನು ಮಾನ್ಯತೆ ಪಡೆದ ಸಂಸ್ಥೆ /ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ಅಭ್ಯರ್ಥಿಗಳು ಸ್ಕೌಟ್ಸ್‌ ಮತ್ತು ಗೈಡ್ಸ್ ಕೋಟಾ ಹುದ್ದೆಗಳಿಗೆ ಸೇರಲು ಅಗತ್ಯವಿರುವ ಪ್ರಮಾಣಪತ್ರಗಳನ್ನು ಹೊಂದಿರಬೇಕು. ಈ ಬಗೆಗೆ ಹೆಚ್ಚು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ವಯೋಮಿತಿ:

ಗ್ರೂಪ್ "ಸಿ" ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 30 ಮತ್ತು ಗ್ರೂಪ್ "ಡಿ" ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 33 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

 

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರನ್ನು ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಮಾಜಿ ಸೈನಿಕ /ಮಹಿಳಾ / ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 250/-ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳು 500/-ರೂ

ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://ncr.indianrailways.gov.in/index.jsp ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 19,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ

ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
North Central Railway Recruitment 2019-20:Apply Online for 08 Scouts & Guides Quota Vacancies. North Central Railway invited Online applications from eligible and interested candidates to fill up Scouts & Guides Quota Posts through North Central Railway official notification July 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more