ಕೋವಿಡ್ -19 ಆತಂಕದ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮುಂದೂಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಮಾರ್ಚ್ 27 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ದಿನಾಂಕ ನಿಗದಿಯಾಗಿತ್ತು. ರಾಜ್ಯದಲ್ಲಿ ಕೊರೊನಾ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದ್ದು, ಹಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಆದರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಬಗೆಗೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿರಲಿಲ್ಲ, ಈ ಬಗೆಗೆ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮನೆ ಮಾಡಿತ್ತು.
ಆದರೆ ಇದೆಲ್ಲದಕ್ಕೂ ಇಂದು ಬ್ರೇಕ್ ಬಿದ್ದಿದೆ. ಕೊರೊನಾ ಸೋಂಕು ಹರಡುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಮುಂದೂಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆದರೆ ನಾಳೆ ಪಿಯುಸಿ ಪರೀಕ್ಷೆಯ ಒಂದು ಪೇಪರ್ ಬಾಕಿ ಇದ್ದು, ಅದು ಯಥಾಪ್ರಕಾರ ನಡೆಯಲಿದೆ ಎಂದು ಸ್ಪಷ್ಟಪಡಿಸಿರುತ್ತಾರೆ.
For Quick Alerts
For Daily Alerts
English summary
SSLC examination has been postponed said by Chief minister B.S yeddyurappa.


Click it and Unblock the Notifications











