ನ್ಯಾಷನಲ್ ಪ್ರಾಡಕ್ಟವಿಟಿ ಕೌನ್ಸಿಲ್ ಇಂಡಿಯಾದಲ್ಲಿ 39 ಸಪೋರ್ಟ್ ಎಕ್ಸಿಕ್ಯುಟಿವ್, ಆಫೀಸ್ ಎಕ್ಸಿಕ್ಯುಟಿವ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 13,2022 ರಿಂದ ಏಪ್ರಿಲ್ 26,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

NPC India ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ನ್ಯಾಷನಲ್ ಪ್ರಾಡಕ್ಟವಿಟಿ ಕೌನ್ಸಿಲ್ ಇಂಡಿಯಾ ನೇಮಕಾತಿಯ ವಿವಿಧ ಹುದ್ದೆಗಳಿಗೆ ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪದವಿ, ೧೨ನೇ ತರಗತಿ, ಕಾನೂನು ಪದವಿ, ಎಂಬಿಎ, ಎಂ.ಕಾಂ, ಸಿ.ಎ, ಪೋಸ್ಟ್ ಗ್ರಾಜುಯೇಟ್ ಮತ್ತು ಬಿ.ಇ/ಬಿ.ಟೆಕ್ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
NPC India ನೇಮಕಾತಿ 2022 ವಯೋಮಿತಿ :
ನ್ಯಾಷನಲ್ ಪ್ರಾಡಕ್ಟವಿಟಿ ಕೌನ್ಸಿಲ್ ಇಂಡಿಯಾ ನೇಮಕಾತಿಯ ವಿವಿಧ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
NPC India ನೇಮಕಾತಿ 2022 ವೇತನದ ವಿವರ :
ನ್ಯಾಷನಲ್ ಪ್ರಾಡಕ್ಟವಿಟಿ ಕೌನ್ಸಿಲ್ ಇಂಡಿಯಾ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,000/- ರಿಂದ 75,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

NPC India ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ನ್ಯಾಷನಲ್ ಪ್ರಾಡಕ್ಟವಿಟಿ ಕೌನ್ಸಿಲ್ ಇಂಡಿಯಾ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
NPC India ನೇಮಕಾತಿ 2022 ಅರ್ಜಿ ಶುಲ್ಕ :
ನ್ಯಾಷನಲ್ ಪ್ರಾಡಕ್ಟವಿಟಿ ಕೌನ್ಸಿಲ್ ಇಂಡಿಯಾ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಲದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
NPC India ನೇಮಕಾತಿ 2022 ಅರ್ಜಿ ಸಲ್ಲಿಕೆ :
ನ್ಯಾಷನಲ್ ಪ್ರಾಡಕ್ಟವಿಟಿ ಕೌನ್ಸಿಲ್ ಇಂಡಿಯಾ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.npcindia.gov.in/NPC/User/index ಗೆ ಭೇಟಿ ನೀಡಿ. ನಂತರ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ed-admin@npcindia.gov.in ವಿಳಾಸಕ್ಕೆ ಏಪ್ರಿಲ್ 13,2022 ರಿಂದ ಏಪ್ರಿಲ್ 26,2022ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.