NPCIL Recruitment 2021 : 173 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್‌ಪಿಸಿಐಎಲ್) ನಲ್ಲಿ 173 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 16ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ನೇಮಕಾತಿ ಬಗೆಗೆ ಹೆಚ್ಚಿನ ಮಾಹಿತಿ ಪಡೆಯಲು ಮುಂದೆ ಓದಿ.

ಎನ್‌ಪಿಸಿಐಎಲ್ ನಲ್ಲಿ 173 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

10ನೇ ತರಗತಿ, ಐಟಿಐ ಮತ್ತು 8 ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಆಗಸ್ಟ್ 16,2021ರ ಅನ್ವಯ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಸ್ಟೈಫೆಂಡ್ :

ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,700/-ರಿಂದ 8,855/-ರೂಗಳ ವರೆಗೆ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://npcilcareers.co.in/MainSite/default.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಸಲ್ಲಿಸಬೇಕಿರುತ್ತದೆ ಮತ್ತು ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಆಗಸ್ಟ್ 16,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Senior Manager (HRM),
HR-Recruitment Section,
Kudankulam Nuclear Power Project,
Kudankulam PO,
Radhapuram Taluk,
Tirunelveli District-627106.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
NPCIL recruitment 2021 notification has been released for 173 trade apprentice posts. Interested candidates can apply before August 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X