ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದಲ್ಲಿ 7 ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 16,2022 ರಿಂದ ಆಗಸ್ಟ್ 14,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

NSFDC ನೇಮಕಾತಿ 2022 ವಿದ್ಯಾರ್ಹತೆ :
ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮ ನೇಮಕಾತಿಯ ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಪದವಿ, ಸ್ನಾತಕೋತ್ತರ ಪದವಿ ಮತ್ತು ಪಿಜಿಡಿಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
NSFDC ನೇಮಕಾತಿ 2022 ವಯೋಮಿತಿ :
ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮ ನೇಮಕಾತಿಯ ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 28 ಮತ್ತು 27 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
NSFDC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮ ನೇಮಕಾತಿಯ ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NSFDC ನೇಮಕಾತಿ 2022 ವೇತನ :
ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮ ನೇಮಕಾತಿಯ ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 93,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
NSFDC ನೇಮಕಾತಿ 2022 ಅರ್ಜಿ ಶುಲ್ಕ :
ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮ ನೇಮಕಾತಿಯ ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 600/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಡ/ಅಂಗವಿಕಲ/ಮಾಜಿಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
NSFDC ನೇಮಕಾತಿ 2022 ಅರ್ಜಿ ಸಲ್ಲಿಕೆ :
ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮ ನೇಮಕಾತಿಯ ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://nsfdc.nic.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 16 ರಿಂದ ಆಗಸ್ಟ್ 14,2022ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











