NTPC Limited Recruitment 2021: 280 ಇಂಜಿನಿಯರಿಂಗ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ (ಎನ್‌ಟಿಪಿಸಿ) 280 ಇಂಜಿನಿಯರಿಂಗ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಜೂನ್ 10ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎನ್‌ಟಿಪಿಸಿ ಲಿಮಿಟೆಡ್ ನಲ್ಲಿ 280 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಇಂಜಿನಿಯರಿಂಗ್ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಎನ್‌ಟಿಪಿಸಿ ನೇಮಕಾತಿಯ ಈ ಹುದ್ದೆಗಳಿಗೆ ಜೂನ್ 10,2021ರ ಅನ್ವಯ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಇಂಜಿನಿಯರಿಂಗ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೇಟ್ 2021 ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.ntpccareers.net/index.php ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 21,2021 ರಿಂದ ಜೂನ್ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಎನ್‌ಟಿಪಿಸಿ ಲಿಮಿಟೆಡ್ ನಲ್ಲಿ 280 ಹುದ್ದೆಗಳ ನೇಮಕಾತಿ
For Quick Alerts
ALLOW NOTIFICATIONS  
For Daily Alerts

English summary
NTPC limited recruitment 2021 notification has been released for 280 engineering executive trainee posts. Interested candidates can apply through online before June 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X