ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ (ಎನ್ಟಿಪಿಸಿ) 19 ಎಕ್ಸಿಕ್ಯುಟಿವ್ ಮತ್ತು ಸರ್ವೇಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಡಿಸೆಂಬರ್ 30,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗ್ಗೆ ತಿಳಿಯಲು ಮುಂದೆ ಓದಿ.
ವಿದ್ಯಾರ್ಹತೆ:
ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಬಹುದು.
ವಯೋಮಿತಿ:
ಎನ್ಟಿಪಿಸಿ ನೇಮಕಾತಿಯ ಈ ಹುದ್ದೆಗಳಿಗೆ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 57,000/- ರಿಂದ 1,89,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 300/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://www.ntpc.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 30,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.