NTPC Recruitment 2021: 230 ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಕೆಮಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ (ಎನ್‌ಟಿಪಿಸಿ) 230 ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಕೆಮಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾರ್ಚ್ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಎನ್‌ಟಿಪಿಸಿಯಲ್ಲಿ 230 ಹುದ್ದೆಗಳ ನೇಮಕಾತಿ...ಮಾ.10ರೊಳಗೆ ಅರ್ಜಿ ಹಾಕಿ

 

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್ ಮತ್ತು ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವ‍ರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಕೆಮಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 1,20,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.ntpccareers.net/index.php ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
NTPC recruitment 2021 notification has been released for 230 assistant engineer and assistant chemist posts. Interested candidates can apply through online before March 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X