ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. ಒಟ್ಟು 55 ಎಕ್ಸಿಕ್ಯುಟಿವ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 8,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

NTPC ನೇಮಕಾತಿ 2022 ವಿದ್ಯಾರ್ಹತೆ :
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೊರ್ಡ್/ಸಂಸ್ಥೆಯಿಂದ ಹೊಂದಿರಬೇಕು.
NTPC ನೇಮಕಾತಿ 2022 ವಯೋಮಿತಿ :
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
NTPC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
NTPC ನೇಮಕಾತಿ 2022 ವೇತನ :
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 90,000/-ರೂ ವೇತನವನ್ನು ನೀಡಲಾಗುವುದು.
NTPC ನೇಮಕಾತಿ 2022 ಅರ್ಜಿ ಶುಲ್ಕ :
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್/ಆಫ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
NTPC ನೇಮಕಾತಿ 2022 ಅರ್ಜಿ ಸಲ್ಲಿಕೆ :
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://careers.ntpc.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 8,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











