ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ (ಎನ್‌ಟಿಆರ್‌ಒ) 71 ಟೆಕ್ನಿಷಿಯನ್ ಎ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಸಂಸ್ಥೆಯು ಈ ಮುಂಚೆ ಅರ್ಜಿಗಳನ್ನು ಡಿಸೆಂಬರ್ 23,2019ರೊಳಗೆ ಸಲ್ಲಿಸಲು ತಿಳಿಸಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 30,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಟೆಕ್ನಿಷಿಯನ್ ಎ |
| Organisation | ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ (ಎನ್‌ಟಿಆರ್‌ಒ) |
| Educational Qualification | 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಐಟಿಐ |
| Job Location | ಭಾರತದೆಲ್ಲೆಡೆ |
| Salary Scale | ತಿಂಗಳಿಗೆ 19,900/- ರಿಂದ 63,200/-ರೂ |
| Application Start Date | December 2, 2019 |
| Application End Date | December 30, 2019 |
ವಿದ್ಯಾರ್ಹತೆ ಏನಿರಬೇಕು ?:
10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಐಟಿಐ ಅನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರಬೇಕು. ಅಲ್ಲದೇ ಅಭ್ಯರ್ಥಿಯು ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.
ವಯೋಮಿತಿ:
ಡಿಸೆಂಬರ್ 23,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.
ವೇತನದ ವಿವರ:
ಟೆಕ್ನಿಷಿಯನ್ ಎ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/- ರಿಂದ 63,200/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ:
ಟೆಕ್ನಿಷಿಯನ್ ಎ ಹುದ್ದೆಗಳಿಗೆ ಸೇರಲು ಇಚ್ಛಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ (ಎನ್‌ಟಿಆರ್‌ಒ)ಯ ಅಧಿಕೃತ ವೆಬ್‌ಸೈಟ್ https://ntro.gov.in/ntroWeb/welcome.do ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 30,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











