ನವೋದಯ ವಿದ್ಯಾಲಯ ಸಮಿತಿಯಲ್ಲಿ ಖಾಲಿ ಇರುವ 1616 ಪಿಜಿಟಿ, ಟಿಜಿಟಿ, ಪ್ರಿನ್ಸಿಪಾಲ್ ಮತ್ತು ಲೈಬ್ರರಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 2,2022 ರಿಂದ ಜುಲೈ 22,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

NVS ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :
ನವೋದಯ ವಿದ್ಯಾಲಯ ಸಮಿತಿ ನೇಮಕಾತಿಯ ಪಿಜಿಟಿ, ಟಿಜಿಟಿ, ಪ್ರಿನ್ಸಿಪಾಲ್ ಮತ್ತು ಲೈಬ್ರರಿಯನ್ ಹುದ್ದೆಗಳಿಗೆ ಬಿ.ಎಡ್, ಸ್ನಾತಕೋತ್ತರ ಪದವಿ, ಬಿ.ಎಸ್ಸಿ, ಪದವಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
NVS ನೇಮಕಾತಿ 2022 ವಯೋಮಿತಿ :
ನವೋದಯ ವಿದ್ಯಾಲಯ ಸಮಿತಿ ನೇಮಕಾತಿಯ ಪಿಜಿಟಿ, ಟಿಜಿಟಿ, ಪ್ರಿನ್ಸಿಪಾಲ್ ಮತ್ತು ಲೈಬ್ರರಿಯನ್ ಹುದ್ದೆಗಳಿಗೆ ಹುದ್ದೆಗಳಿಗನುಸಾರ ಗರಿಷ್ಟ ೩5 ರಿಂದ ೫೦ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
NVS ನೇಮಕಾತಿ 2022 ವೇತನ ವಿವರ :
ನವೋದಯ ವಿದ್ಯಾಲಯ ಸಮಿತಿ ನೇಮಕಾತಿಯ ಪಿಜಿಟಿ, ಟಿಜಿಟಿ, ಪ್ರಿನ್ಸಿಪಾಲ್ ಮತ್ತು ಲೈಬ್ರರಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,900/- ರಿಂದ 2,09,200/-ರೂಗಳ ವರೆಗೆ ವೇತನ ನೀಡಲಾಗುವುದು.

NVS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ನವೋದಯ ವಿದ್ಯಾಲಯ ಸಮಿತಿ ನೇಮಕಾತಿಯ ಪಿಜಿಟಿ, ಟಿಜಿಟಿ, ಪ್ರಿನ್ಸಿಪಾಲ್ ಮತ್ತು ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ, ಲಿಖಿತ ಪರೀಕ್ಷೆ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
NVS ನೇಮಕಾತಿ 2022 ಅರ್ಜಿ ಶುಲ್ಕ :
ನವೋದಯ ವಿದ್ಯಾಲಯ ಸಮಿತಿ ನೇಮಕಾತಿಯ ಪ್ರಿನ್ಸಿಪಾಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2,000/-ರೂ, ಪಿಜಿಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1,800/-ರೂ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1,500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
NVS ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :
ನವೋದಯ ವಿದ್ಯಾಲಯ ಸಮಿತಿ ನೇಮಕಾತಿಯ ಪಿಜಿಟಿ, ಟಿಜಿಟಿ, ಪ್ರಿನ್ಸಿಪಾಲ್ ಮತ್ತು ಲೈಬ್ರರಿಯನ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://navodaya.gov.in/nvs/en/Home1 ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 2,2022 ರಿಂದ ಜುಲೈ 22,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಖುದ್ದಾಗಿ/ಅಂಚೆ/ಕೊರಿಯರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.