NVS Recruitment 2022 : 1925 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವೋದಯ ವಿದ್ಯಾಲಯ ಸಮಿತಿಯಲ್ಲಿ ಖಾಲಿ ಇರುವ 1925 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 12,2022 ರಿಂದ ಫೆಬ್ರವರಿ 10,2022ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ನವೋದಯ ವಿದ್ಯಾಲಯ ಸಮಿತಿಯಲ್ಲಿ 1925 ಹುದ್ದೆಗಳ ನೇಮಕಾತಿ

NVS ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ನವೋದಯ ವಿದ್ಯಾಲಯ ಸಮಿತಿ ನೇಮಕಾತಿಯ ವಿವಿಧ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ದ್ವಿತೀಯ ಪಿಯುಸಿ, ಪದವಿ, ಡಿಪ್ಲೋಮಾ, 10ನೇ ತರಗತಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

NVS ನೇಮಕಾತಿ 2022 ವಯೋಮಿತಿ :

ನವೋದಯ ವಿದ್ಯಾಲಯ ಸಮಿತಿ ನೇಮಕಾತಿಯ ವಿವಿಧ ಹುದ್ದೆಗಳಿಗೆ ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

NVS ನೇಮಕಾತಿ 2022 ವೇತನ ವಿವರ :

ನವೋದಯ ವಿದ್ಯಾಲಯ ಸಮಿತಿ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 2,09,200/-ರೂಗಳ ವರೆಗೆ ವೇತನ ನೀಡಲಾಗುವುದು.

NVS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನವೋದಯ ವಿದ್ಯಾಲಯ ಸಮಿತಿ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ, ಲಿಖಿತ ಪರೀಕ್ಷೆ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

NVS ನೇಮಕಾತಿ 2022 ಅರ್ಜಿ ಶುಲ್ಕ :

ನವೋದಯ ವಿದ್ಯಾಲಯ ಸಮಿತಿ ನೇಮಕಾತಿಯ ಅಸಿಸ್ಟೆಂಟ್ ಕಮಿಷನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1,500/-ರೂ, ಫೀಮೇಲ್ ಸ್ಟಾಫ್ ನರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1,200/-ರೂ,ಇತರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1,000/-ರೂ ಮತ್ತು ಲ್ಯಾಬ್ ಅಟೆಂಡೆಂಟ್, ಮೆಸ್ ಹೆಲ್ಪರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

NVS ನೇಮಕಾತಿ 2022 ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಕೆ ಆರಂಭ ದಿನಾಂಕ : ಜನವರಿ 12,2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಫೆಬ್ರವರಿ 10,2022
ಅರ್ಜಿ ಶುಲ್ಕ ಪಾವತಿಗೆ ಆರಂಭ ದಿನಾಂಕ : ಜವರಿ 12,2022
ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನಾಂಕ : ಫೆಬ್ರವರಿ 10,2022
ಆನ್‌ಲೈನ್ ಪರೀಕ್ಷೆ ದಿನಾಂಕ : ಮಾರ್ಚ್ 9,2022 ರಿಂದ ಮಾರ್ಚ್ 11,2022

NVS ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ನವೋದಯ ವಿದ್ಯಾಲಯ ಸಮಿತಿ ನೇಮಕಾತಿಯ ವಿವಿಧ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://navodaya.gov.in/nvs/en/Home1/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 12,2022 ರಿಂದ ಫೆಬ್ರವರಿ 10,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಖುದ್ದಾಗಿ/ಅಂಚೆ/ಕೊರಿಯರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NVS recruitment 2022 notification has been released for 1925 various posts. Interested candidates can apply before February 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+