ನೆಹರು ಯುವ ಕೇಂದ್ರ ಸಂಘಥನ್ (ಎನ್‌ವೈಕೆಎಸ್) 14 ಡೆಪ್ಯುಟಿ ನಿರ್ದೇಶಕ ಮತ್ತು ಜಂಟಿ ನಿರ್ದೇಶಕ/ರಾಜ್ಯ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 4,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
ಪೋಸ್ಟ್ ಗ್ರಾಜುಯೇಶನ್, ಡಿಪ್ಲೋಮಾ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಮಾರ್ಚ್ 4,2021ರ ಅನ್ವಯ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನ:
ಡೆಪ್ಯುಟಿ ನಿರ್ದೇಶಕ ಮತ್ತು ಜಂಟಿ ನಿರ್ದೇಶಕ/ರಾಜ್ಯ ನಿರ್ದೇಶಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 1,77,500/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://nyks.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 4,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
The Executive Director,
Nehru yuva kendra sangathan,
An autonomous body under ministry of youth affairs and sports,
4- Jeevan deep building,
Ground floor,
sansad marg,
New delhi-110001.
ಅಭ್ಯರ್ಥಿಗಳು ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಜಂಟಿ ನಿರ್ದೇಶಕರು ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











