Oil India Limited Recruitment 2021: 48 ಆಪರೇಟರ್ ಮತ್ತು ಮೆಕ್ಯಾನಿಕ್ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ

ಆಯಿಲ್ ಇಂಡಿಯಾ ಲಿಮಿಟೆಡ್ 48 ಆಪರೇಟರ್ ಮತ್ತು ಮೆಕ್ಯಾನಿಕ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆದುಕೊಂಡು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಆಯಿಲ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

10ನೇ ತರಗತಿ, ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಆಪರೇಟರ್ ಮತ್ತು ಮೆಕ್ಯಾನಿಕ್ ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,700/- ರಿಂದ 18,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 25, ಮಾರ್ಚ್ 1, 8, 15 ಮತ್ತು 22,2021ರಂದು ಬೆಳಿಗ್ಗೆ 7 ರಿದ 11 ಗಂಟೆಯವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳು ಆಯಿಲ್ ಇಂಡಿಯಾ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Oil india limited recruitment 2021 notification has been released for 48 operator and mechanic posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X