ಓಎನ್‌ಜಿಸಿ ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಓಎಂಪಿಎಲ್) ಒಟ್ಟು 17 ಗ್ರಾಜುಯೇಟ್ /ಟೆಕ್ನೀಶಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಆಗಸ್ಟ್ 23,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಮತ್ತಷ್ಟು ಮಾಹಿತಿಗಾಗಿ ಮುಂದೆ ಓದಿ.

| CRITERIA | DETAILS |
| Name Of The Posts | ಗ್ರಾಜುಯೇಟ್ /ಟೆಕ್ನೀಶಿಯನ್ ಅಪ್ರೆಂಟಿಸ್ ಟ್ರೈನಿ |
| Organisation | ಓಎನ್‌ಜಿಸಿ ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಓಎಂಪಿಎಲ್) |
| Educational Qualification | ಇಂಜಿನಿಯರಿಂಗ್‌ನಲ್ಲಿ ಪದವಿ, ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ |
| Job Location | ಮಂಗಳೂರು (ಕರ್ನಾಟಕ) |
| Salary Scale | ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ-ತಿಂಗಳಿಗೆ 10,000/-ರೂ ಮತ್ತು ಟೆಕ್ನೀಶಿಯನ್ ಅಪ್ರೆಂಟಿಶಿಪ್ - ತಿಂಗಳಿಗೆ 7,100/-ರೂ |
| Application Start Date | July 24, 2019 |
| Application End Date | August 23, 2019 |
ವಿದ್ಯಾರ್ಹತೆ:
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿಗೆ ಇಂಜಿನಿಯರಿಂಗ್‌ನಲ್ಲಿ ಪದವಿ ಮತ್ತು ಟೆಕ್ನೀಶಿಯನ್ ಅಪ್ರೆಂಟಿಶಿಪ್ ಟ್ರೈನಿಗೆ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000/-ರೂ ಮತ್ತು ಟೆಕ್ನೀಶಿಯನ್ ಅಪ್ರೆಂಟಿಶಿಪ್ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,100/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಅಭ್ಯರ್ಥಿಗಳು ಓಎನ್‌ಜಿಸಿ ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಓಎಂಪಿಎಲ್)ನ ಅಧಿಕೃತ ವೆಬ್‌ಸೈಟ್ https://ompl.co.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 23,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ
ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ


Click it and Unblock the Notifications











