OMPL Recruitment 2020: 25 ಗ್ರಾಜುಯೇಟ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಒನ್‌ಜಿಸಿ ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಒಎಂಪಿಎಲ್) 25 ಗ್ರಾಜುಯೇಟ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 1,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಡಿಪ್ಲೋಮಾ ಮತ್ತು ಇಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗಾವಕಾಶ

 

ವಿದ್ಯಾರ್ಹತೆ:

ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವಿ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಒಎಂಪಿಎಲ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಸ್ಟೈಫೆಂಡ್:

ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000/-ರೂ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/-ರೂ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.ompl.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 1,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
OMPL recruitment 2020 notification has been released for 25 graduate and technician apprentice posts. Interested candidates can apply through online before January 1.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X