ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಸಹಾಯಕ ಕಾನೂನು ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿದ ನಂತರ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಓಎನ್‌ಜಿಸಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿಯನ್ನು ಏಪ್ರಿಲ್ 9.2019 ರೊಳಗೆ ಸಲ್ಲಿಸಬೇಕಿರುತ್ತದೆ.

| CRITERIA | DETAILS |
| Name Of The Posts | ಸಹಾಯಕ ಕಾನೂನು ಸಲಹೆಗಾರ |
| Organisation | ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಶನ್ ಲಿಮಿಟೆಡ್ |
| Educational Qualification | ಕಾನೂನು ಪದವಿ |
| Job Location | ಭಾರತದೆಲ್ಲೆಡೆ |
| Salary Scale | ತಿಂಗಳಿಗೆ 60,000/- ರಿಂದ 1,80,000/-ರೂ |
| Application Start Date | March 15, 2019 |
| Application End Date | April 9, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಕಾನೂನು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಜನವರಿ 1,2019ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳು ಮತ್ತು ಅಂಗವಿಕಲ ಅಭ್ಯರ್ಥಿಗಳಿಗ10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನದ ವಿವರ:
ಸಹಾಯಕ ಕಾನೂನು ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/- ರಿಂ ದ 1,80,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು CLAT -2019ರ ಅಂಕಗಳ ಆಧಾರದ ಮೇಲೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ, ಓಬಿಸಿ ಮತ್ತು ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 370/-ರೂ ಅರ್ಜಿ ಶುಲ್ಕವನ್ನು ಚಲನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಓಎನ್‌ಜಿಸಿ ಯ ಅಧಿಕೃತ ವೆಬ್‌ಸೈಟ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಏಪ್ರಿಲ್ 9,2019 ರೊಳಗೆ ಅರ್ಜಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಬಹುದು.
ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಭ್ಯರ್ಥಿಗಳು ಓಎನ್‌ಜಿಸಿಯ ಅಧಿಕೃತ ವೆಬ್‌ಸೈಟ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











