ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್ ಲಿಮಿಟೆಡ್ ಮ್ಯಾನೇಜರ್, ಇಂಜಿನಿಯರ್, ಎಕ್ಸಿಕ್ಯುಟಿವ್ ಅಸಿಸ್ಟೆಂಟ್ ಮತ್ತು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಸದರಿ ಹುದ್ದೆಳು ಆಂಧ್ರ ಪ್ರದೇಶ, ಕರ್ನಾಟಕ ಮತ್ತು ಉತ್ತರ ಪ್ರದೇಶದಲ್ಲಿ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಮೇ.8ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಬಿ.ಇ/ಬಿ.ಟೆಕ್/ಇಂಜಿನಿಯರಿಂಗ್ ನಲ್ಲಿ ಪದವಿ; ಪದವಿ; ಪದವಿ ಜೊತೆಗೆ ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿಯ ವಿವಿಧ ಹುದ್ದೆಗಳಿಗೆ ಏಪ್ರಿಲ್ 17,2020ರ ಅನ್ವಯ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನದ ವಿವರ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಓನ್ಜಿಸಿ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು, ನಂತರ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಗುಂಪು ಚರ್ಚೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕದ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದತಕ್ಕದ್ದು.
ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಮೇ.8ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಕಚೇರಿಯ ವಿಳಾಸವನ್ನು ಅಧಿಸೂಚನೆಯನ್ನು ಓದಿ ಪಡೆಯಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ