ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ದಲ್ಲಿ 21 ಹೆಚ್‌ಆರ್ ಎಕ್ಸಿಕ್ಯುಟಿವ್ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 15,2021 ರಿಂದ ಜನವರಿ 4,2022ರ ರಾತ್ರಿ 11:55ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
ONGC ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಹೆಚ್‌ಆರ್ ಎಕ್ಸಿಕ್ಯುಟಿವ್ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಎಂಬಿಎ/ಪೋಸ್ಟ್ ಗ್ರಾಜುಯೇಶನ್ ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆ ; ಪಿಜಿ ಪದವಿ/ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ONGC ನೇಮಕಾತಿ 2021 ಖಾಲಿ ಹುದ್ದೆಗಳ ವಿವರ:
ಹೆಚ್‌ಆರ್ ಎಕ್ಸಿಕ್ಯುಟಿವ್ - 15 ಹುದ್ದೆಗಳು
ಸಾರ್ವಜನಿಕ ಸಂಪರ್ಕ ಅಧಿಕಾರಿ - 6 ಹುದ್ದೆಗಳು
ಒಟ್ಟು 21 ಹುದ್ದೆಗಳು
ONGC ನೇಮಕಾತಿ 2021 ವಯೋಮಿತಿ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಹೆಚ್‌ಆರ್ ಎಕ್ಸಿಕ್ಯುಟಿವ್ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಟ 30 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಯ ಗರಿಷ್ಟ 33 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 35 ವರ್ಷ ಮತ್ತು ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.
ONGC ನೇಮಕಾತಿ 2021 ವೇತನ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಹೆಚ್‌ಆರ್ ಎಕ್ಸಿಕ್ಯುಟಿವ್ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಎನ್‌ಜಿಸಿ ನೇಮಕಾತಿ ನಿಯಮಾನಸಾರ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.
ONGC ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಹೆಚ್‌ಆರ್ ಎಕ್ಸಿಕ್ಯುಟಿವ್ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆ, ಯುಜಿಸಿ ಎನ್‌ಇಟಿ ಜೂನ್ 2020ರ ಅಂಕಗಳ ಆಧಾರದ ಮೇಲೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.
ONGC ನೇಮಕಾತಿ 2021 ಅರ್ಜಿ ಶುಲ್ಕ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಹೆಚ್‌ಆರ್ ಎಕ್ಸಿಕ್ಯುಟಿವ್ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ONGC ನೇಮಕಾತಿ 2021 ಅರ್ಜಿ ಸಲ್ಲಿಕೆ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಹೆಚ್‌ಆರ್ ಎಕ್ಸಿಕ್ಯುಟಿವ್ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.ongcindia.com/wps/wcm/connect/en/home ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 15,2021 ರಿಂದ ಜನವರಿ 4,2022ರ ರಾತ್ರಿ 11:55ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











