ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ಒಎನ್ ಜಿಸಿ), ONGC GT ನೇಮಕಾತಿ ಅಧಿಸೂಚನೆ 2021 ಅನ್ನು ಬಿಡುಗಡೆ ಮಾಡಿದೆ. ಒನ್‌ಜಿಸಿ ಯಲ್ಲಿ ಒಟ್ಟು 309 ಗ್ರಾಜುಯೇಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು, GATE 2021 ಪರೀಕ್ಷೆಯಲ್ಲಿ ಉತ್ತೀರ್ಣರಾದ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಕಾರ್ಯನಿರ್ವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಅಕ್ಟೋಬರ್ 11,2021 ರಿಂದ ಪ್ರಾರಂಭವಾಗಿ ನವೆಂಬರ್ 1,2021 ರಂದು ಕೊನೆಗೊಳ್ಳಲಿದೆ.
ONGC ನೇಮಕಾತಿ 2021 ವಿದ್ಯಾರ್ಹತೆ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ಒಎನ್ ಜಿಸಿ) ನೇಮಕಾತಿಯ ಗ್ರಾಜುಯೇಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಹುದ್ದೆಗೆ ಸಂಬಂಧಿಸಿದ ವಿಭಾಗಗಳಲ್ಲಿ ಎಂಜಿನಿಯರಿಂಗ್ ಪದವಿ ಹೊಂದಿರಬೇಕು; ಹುದ್ದೆಗೆ ಸಂಬಂಧಪಟ್ಟ ವಿಭಾಗದಲ್ಲಿ ಸ್ನಾತಕೋತ್ತರ ಪದವಿ/ಎಂಎಸ್ಸಿ/ಎಂಟೆಕ್ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು ಮತ್ತು ಒಎನ್ ಜಿಸಿ ನೇಮಕಾತಿ 2021 ಅಧಿಸೂಚನೆಯಲ್ಲಿ ವಿವರಿಸಿದಂತೆ ಹುದ್ದೆಗೆ ಸಂಬಂಧಿತ ವಿಭಾಗದಲ್ಲಿ ಗೇಟ್ 2021 ಪರೀಕ್ಷೆಗೆ ಹಾಜರಾಗಿರಬೇಕು/ಅರ್ಹತೆ ಪಡೆದಿರಬೇಕು ಎಂದು ತಿಳಿಸಲಾಗಿದೆ.
ONGC ನೇಮಕಾತಿ 2021 ವಯೋಮಿತಿ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ಒಎನ್ ಜಿಸಿ) ನೇಮಕಾತಿಯ ಗ್ರಾಜುಯೇಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಹಾಗೂ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳ ವಯೋಮಿತಿಯು ಜುಲೈ 31,2020ರ ಅನ್ವಯ (ಎಇಇ) ಗರಿಷ್ಟ 28 ವರ್ಷ ಮತ್ತು (ಎಇಇ ಹೊರತುಪಡಿಸಿ ಉಳಿದ ಹುದ್ದೆಗಳಿಗೆ) ಗರಿಷ್ಟ 30 ವರ್ಷದೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ONGC ನೇಮಕಾತಿ 2021ವೇತನ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ಒಎನ್ ಜಿಸಿ) ನೇಮಕಾತಿಯ ಗ್ರಾಜುಯೇಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಎನ್‌ಜಿಸಿ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ONGC ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ಒಎನ್ ಜಿಸಿ) ನೇಮಕಾತಿಯ ಗ್ರಾಜುಯೇಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಮೆರಿಟ್, ಗೇಟ್ 2021 ಅಂಕಗಳ ಆಧಾರದ ಮೇಲೆ ಶಾರ್ಟ್‌ಲೀಸ್ಟ್ ಮಾಡಿ ನೇರಸಂದರ್ಶನದ ಮೂಲಕ ಆಯ್ಕೆ ಆಯ್ಕೆ ಮಾಡಲಾಗುವುದು.
ONGC ನೇಮಕಾತಿ 2021 ಅರ್ಜಿ ಶುಲ್ಕ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ಒಎನ್ ಜಿಸಿ) ನೇಮಕಾತಿಯ ಗ್ರಾಜುಯೇಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 300/-ರೂ ಅರ್ಜಿ ಶುಲ್ಕವನ್ನು ಎಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಡ/ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ ಎಂದು ಒಎನ್‌ಜಿಸಿ ನೇಮಕಾತಿ 2021 ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ONGC ನೇಮಕಾತಿ 2021 ಅರ್ಜಿ ಸಲ್ಲಿಕೆ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ಒಎನ್ ಜಿಸಿ) ನೇಮಕಾತಿಯ ಗ್ರಾಜುಯೇಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.ongcindia.com/wps/wcm/connect/en/home ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 11,2021 ರಿಂದ ನವೆಂಬರ್ 1,2021ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ಒಎನ್ ಜಿಸಿ) ನೇಮಕಾತಿಯ ಗ್ರಾಜುಯೇಟ್ ಟ್ರೈನಿ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











