ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ದಲ್ಲಿ 28 ಜ್ಯೂನಿಯರ್ ಕನ್ಸಲ್ಟೆಂಟ್/ಅಸೋಸಿಯೇಟ್ ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಮಾರ್ಚ್ 1,2022ರ ಸಂಜೆ 4:30ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
ONGC ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಜ್ಯೂನಿಯರ್ ಕನ್ಸಲ್ಟೆಂಟ್/ಅಸೋಸಿಯೇಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವೃತ್ತಿಯಲ್ಲಿ ಅನುಭವ ಹೊಂದಿರಬೇಕು.
ONGC ನೇಮಕಾತಿ 2022 ವಯೋಮಿತಿ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಜ್ಯೂನಿಯರ್ ಕನ್ಸಲ್ಟೆಂಟ್/ಅಸೋಸಿಯೇಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾರ್ಚ್ 1,2022ರ ಅನ್ವಯ ಗರಿಷ್ಟ 56 ವರ್ಷ ವಯೋಮಿತಿಯೊಳಗಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.
ONGC ನೇಮಕಾತಿ 2022 ವೇತನ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಜ್ಯೂನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ಮತ್ತು ಅಸೋಸಿಯೇಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/-ರೂ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.
ONGC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಜ್ಯೂನಿಯರ್ ಕನ್ಸಲ್ಟೆಂಟ್/ಅಸೋಸಿಯೇಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.
ONGC ನೇಮಕಾತಿ 2022 ಅರ್ಜಿ ಶುಲ್ಕ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಜ್ಯೂನಿಯರ್ ಕನ್ಸಲ್ಟೆಂಟ್/ಅಸೋಸಿಯೇಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ONGC ನೇಮಕಾತಿ 2022 ಅರ್ಜಿ ಸಲ್ಲಿಕೆ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಜ್ಯೂನಿಯರ್ ಕನ್ಸಲ್ಟೆಂಟ್/ಅಸೋಸಿಯೇಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://www.ongcindia.com/wps/wcm/connect/en/home ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್ 1,2022ರ ಸಂಜೆ 4:30ರೊಳಗೆ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.