ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ದಲ್ಲಿ 3614 ಅಪ್ರೆಂಟಿಸ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೇ 15,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ONGC ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಬಿ.ಕಾಂ, ಬಿ.ಎ, ಬಿಬಿಎ, ಬಿ.ಎಸ್ಸಿ, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ONGC ನೇಮಕಾತಿ 2022 ವಯೋಮಿತಿ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೇ 1೫,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ONGC ನೇಮಕಾತಿ 2022 ವೇತನ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,700/- ರಿಂದ 9,000/-ರೂ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.
ONGC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

ONGC ನೇಮಕಾತಿ 2022 ಅರ್ಜಿ ಶುಲ್ಕ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ONGC ನೇಮಕಾತಿ 2022 ಅರ್ಜಿ ಸಲ್ಲಿಕೆ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.ongcindia.com/wps/wcm/connect/en/home ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಆಸಕ್ತರು https://www.apprenticeshipindia.gov.in/ ವೆಬ್‌ಸೈಟ್ ನಲ್ಲಿ ಮೊದಲು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವ ಮೂಲಕ ಏಪ್ರಿಲ್ 27,2022 ರಿಂದ ಮೇ 15,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.