ONGC Recruitment 2022 : 56 ಹಣಕಾಸು ಅಧಿಕಾರಿ ಮತ್ತು ಮರೈನ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC)ದಲ್ಲಿ 56 ಹಣಕಾಸು ಅಧಿಕಾರಿ ಮತ್ತು ಮರೈನ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 18,2022 ರಿಂದ ನವೆಂಬರ್ 7,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ತೈಲ ಮತ್ತು ನೈಸರ್ಗಿಕ ಅನಿಲ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ONGC ನೇಮಕಾತಿ 2022 ವಿದ್ಯಾರ್ಹತೆ :

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) ನೇಮಕಾತಿಯ ಹಣಕಾಸು ಅಧಿಕಾರಿ ಮತ್ತು ಮರೈನ್ ಅಧಿಕಾರಿ ಹುದ್ದೆಗಳಿಗೆ ಸಿಎ, ಐಸಿಡಬ್ಲ್ಯೂಎ, ಪದವಿ, ಎಂಬಿಎ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.

ONGC ನೇಮಕಾತಿ 2022 ವಯೋಮಿತಿ :

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) ನೇಮಕಾತಿಯ ಹಣಕಾಸು ಅಧಿಕಾರಿ ಮತ್ತು ಮರೈನ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನವೆಂಬರ್ 7,2022ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ONGC ನೇಮಕಾತಿ 2022 ವೇತನ :

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) ನೇಮಕಾತಿಯ ಹಣಕಾಸು ಅಧಿಕಾರಿ ಮತ್ತು ಮರೈನ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 60,000/- ರಿಂದ 1,80,000/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ONGC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) ನೇಮಕಾತಿಯ ಹಣಕಾಸು ಅಧಿಕಾರಿ ಮತ್ತು ಮರೈನ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ONGC ನೇಮಕಾತಿ 2022 ಅರ್ಜಿ ಶುಲ್ಕ :

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) ನೇಮಕಾತಿಯ ಹಣಕಾಸು ಅಧಿಕಾರಿ ಮತ್ತು ಮರೈನ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ.

ONGC ನೇಮಕಾತಿ 2022 ಅರ್ಜಿ ಸಲ್ಲಿಕೆ :

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) ನೇಮಕಾತಿಯ ಹಣಕಾಸು ಅಧಿಕಾರಿ ಮತ್ತು ಮರೈನ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://ongcindia.com/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 18,2022 ರಿಂದ ನವೆಂಬರ್ 7,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
ONGC recruitment 2022 notification has been released for 56 finance officer and marine officer posts. Interested candidates can apply before November 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+