ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ದಲ್ಲಿ 7 ಜ್ಯೂನಿಯರ್ ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 1,2022 ರಿಂದ ಜುಲೈ 24,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ONGC ನೇಮಕಾತಿ 2022 ವಿದ್ಯಾರ್ಹತೆ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಜ್ಯೂನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರಬೇಕು.
ONGC ನೇಮಕಾತಿ 2022 ವಯೋಮಿತಿ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಜ್ಯೂನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜುಲೈ ೨೪,2022ರ ಅನ್ವಯ ಗರಿಷ್ಟ 65 ವರ್ಷ ವಯೋಮಿತಿಯೊಳಗಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ONGC ನೇಮಕಾತಿ 2022 ವೇತನ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಜ್ಯೂನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

ONGC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಜ್ಯೂನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.
ONGC ನೇಮಕಾತಿ 2022 ಅರ್ಜಿ ಶುಲ್ಕ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಜ್ಯೂನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ONGC ನೇಮಕಾತಿ 2022 ಅರ್ಜಿ ಸಲ್ಲಿಕೆ :
ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಜ್ಯೂನಿಯರ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.ongcindia.com/wps/wcm/connect/en/home ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ಅಥವಾ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜುಲೈ 1 ರಿಂದ ಜುಲೈ 24,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











