ONGC Recruitment 2022 : 922 ಜ್ಯೂನಿಯರ್ ಇಂಜಿನಿಯರ್ ಮತ್ತು ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ದಲ್ಲಿ 922 ಜ್ಯೂನಿಯರ್ ಇಂಜಿನಿಯರ್ ಮತ್ತು ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 7,2022 ರಿಂದ ಮೇ 28,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಒಎನ್‌ಜಿಸಿ ಯಲ್ಲಿ 922 ಹುದ್ದೆಗಳಿಗೆ ಅರ್ಜಿ ಆಹ್ವಾನ

ONGC ನೇಮಕಾತಿ 2022 ವಿದ್ಯಾರ್ಹತೆ :

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಜ್ಯೂನಿಯರ್ ಇಂಜಿನಿಯರ್ ಮತ್ತು ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಡಿಪ್ಲೋಮಾ, ಬಿ.ಕಾಂ, 12ನೇ ತರಗತಿ, ಬಿ.ಎಸ್ಸಿ, ಪೋಸ್ಟ್ ಗ್ರಾಜುಯೇಟ್, ಪಿಜಿ ಡಿಪ್ಲೋಮಾ, 10ನೇ ತರಗತಿ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ONGC ನೇಮಕಾತಿ 2022 ವಯೋಮಿತಿ :

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಜ್ಯೂನಿಯರ್ ಇಂಜಿನಿಯರ್ ಮತ್ತು ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಒಎನ್‌ಜಿಸಿ ಯಲ್ಲಿ 922 ಹುದ್ದೆಗಳಿಗೆ ಅರ್ಜಿ ಆಹ್ವಾನ

ONGC ನೇಮಕಾತಿ 2022 ವೇತನ :

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಜ್ಯೂನಿಯರ್ ಇಂಜಿನಿಯರ್ ಮತ್ತು ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/- ರಿಂದ 98,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

ONGC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಜ್ಯೂನಿಯರ್ ಇಂಜಿನಿಯರ್ ಮತ್ತು ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಇತರೆ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಒಎನ್‌ಜಿಸಿ ಯಲ್ಲಿ 922 ಹುದ್ದೆಗಳಿಗೆ ಅರ್ಜಿ ಆಹ್ವಾನ

ONGC ನೇಮಕಾತಿ 2022 ಅರ್ಜಿ ಶುಲ್ಕ :

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಜ್ಯೂನಿಯರ್ ಇಂಜಿನಿಯರ್ ಮತ್ತು ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ONGC ನೇಮಕಾತಿ 2022 ಅರ್ಜಿ ಸಲ್ಲಿಕೆ :

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಜ್ಯೂನಿಯರ್ ಇಂಜಿನಿಯರ್ ಮತ್ತು ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://ongcindia.com/wps/wcm/connect/en/home/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮೇ 7,2022 ರಿಂದ ಮೇ 28,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
ONGC recruitment 2022 notification has been released for 922 junior engineer and junior assistant posts. Interested candidates can apply before May 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X