PES Engineering College: 13 ಸಹಾಯಕ ಮತ್ತು ಸಂಯೋಜಿತ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ

ಪಿಇಎಸ್ ಇಂಜಿನಿಯರಿಂಗ್‌ ಕಾಲೇಜು ಮಂಡ್ಯ, ಇಲ್ಲಿ 13 ಸಹಾಯಕ ಮತ್ತು ಸಂಯೋಜಿತ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಏಪ್ರಿಲ್ 3,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜು ಮಂಡ್ಯದಲ್ಲಿ 13 ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಸಹಾಯಕ ಮತ್ತು ಸಂಯೋಜಿತ ಪ್ರಾಧ್ಯಾಪಕ
Organisation ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜು
Educational Qualification ಬಿ.ಇ/ಬಿ.ಟೆಕ್ ಮತ್ತು ಎಂ.ಇ /ಎಂ.ಟೆಕ್, ಪಿ.ಹೆಚ್‌ಡಿ
Job Location ಮಂಡ್ಯ (ಕರ್ನಾಟಕ)
Salary Scale ನೇಮಕಾತಿ ನಿಯಮಾನುಸಾರ ವೇತನ
Application Start Date March 3, 2020
Application End Date April 3, 2020

ವಿದ್ಯಾರ್ಹತೆ:

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಬಿ.ಇ/ಬಿ.ಟೆಕ್ ಮತ್ತು ಎಂ.ಇ /ಎಂ.ಟೆಕ್ ಗಳಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರಬೇಕು.
ಸಂಯೋಜಿತ ಪ್ರಾಧ್ಯಾಪಕ ಹುದ್ದೆಗೆ ಕನಿಷ್ಟ 5 ವರ್ಷಗಳ ಬೋಧನೆ/ ಸಂಶೋಧನೆ / ಕೈಗಾರಿಕೆಯಲ್ಲಿ ಅನುಭವ ಹೊಂದಿರಬೇಕು. ಅದರಲ್ಲಿ 2 ವರ್ಷಗಳ ಕಾಲ ಪಿ.ಹೆಚ್‌ಡಿ ನಂತರ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ:

ಕರ್ನಾಟಕ ಸರ್ಕಾರದ ನಿಯಮಾವಳಿಗಳಂತೆ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

2006ರ ಪರಿಷ್ಕೃತ ಎಐಸಿಟಿಇ ವೇತನ ಶ್ರೇಣಿಯನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಪ್ರಸ್ತುತ ಬ್ಯಾಕ್‌ಲಾಗ್ ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತಿದ್ದು, ಬ್ಯಾಕ್‌ಲಾಗ್ ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ ಮತ್ತು ಅರ್ಜಿ ಶುಲ್ಕ:

ಅರ್ಹ ಅಭ್ಯರ್ಥಿಗಳು 600/-ರೂ ಅರ್ಜಿ ಶುಲ್ಕವನ್ನು ಡಿಡಿ ಅಥವಾ ನೇರವಾಗಿ ನಗದು ವಿಭಾಗದಲ್ಲಿ ಪಾವತಿಸಿ ಅರ್ಜಿ ನಮೂನೆಯನ್ನು ಪಡೆದು ಏಪ್ರಿಲ್ 3,2020ರಂದು ಸಂಜೆ 5 ಗಂಟೆಯೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲಾತಿಗಳೊಡನೆ ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ, ಖುದ್ದು ಅಥವಾ ಅಂಚೆ ಮೂಲಕ ಕಚೇರಿಯ ವಿಳಾಸಕ್ಕೆ ತಲುಪಿಸಬೇಕಿರುತ್ತದೆ. ಅರ್ಜಿಯನ್ನು ಸಲ್ಲಿಸುವಾಗ ಅಭ್ಯರ್ಥಿಗಳು ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಛೇರಿಯ ವಿಳಾಸ:

ಪ್ರಾಂಶುಪಾಲರು,
ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜು,
ಮಂಡ್ಯ-571401.

ಅಧಿಕೃತ ವೆಬ್‌ಸೈಟ್‌: http://www.pescemandya.org/

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜು ಮಂಡ್ಯದಲ್ಲಿ 13 ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts

English summary
PES engineering college mandya recruitment 2020 notification has been released on official website for the recruitment of 13 assistant and associate professor posts. Interested candidates can apply before 3rd April 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+