ಪಿಇಎಸ್ ಇಂಜಿನಿಯರಿಂಗ್ ಕಾಲೇಜು ಮಂಡ್ಯ, ಇಲ್ಲಿ 5 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 26,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
CRITERIA | DETAILS |
Name Of The Posts | ಸಹಾಯಕ ಪ್ರಾಧ್ಯಾಪಕ |
Organisation | ಪಿಇಎಸ್ ಇಂಜಿನಿಯರಿಂಗ್ ಕಾಲೇಜು |
Educational Qualification | ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಬಿ.ಇ/ಬಿ.ಟೆಕ್ ಮತ್ತು ಎಂ.ಇ /ಎಂ.ಟೆಕ್ |
Job Location | ಮಂಡ್ಯ (ಕರ್ನಾಟಕ) |
Salary Scale | ನೇಮಕಾತಿ ನಿಯಮಾನುಸಾರ ವೇತನ |
Application Start Date | December 10, 2019 |
Application End Date | December 26, 2019 |
ವಿದ್ಯಾರ್ಹತೆ:
ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಬಿ.ಇ/ಬಿ.ಟೆಕ್ ಮತ್ತು ಎಂ.ಇ /ಎಂ.ಟೆಕ್ ಗಳಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರಬೇಕು. ಸಂಬಂಧಿಸಿದ ವಿಷಯದಲ್ಲಿ ಪಿಹೆಚ್.ಡಿ ಪದವಿ ಕಡ್ಡಾಯವಾಗಿರುತ್ತದೆ.
ವೇತನದ ವಿವರ:
ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಎಐಸಿಟಿಇ ನಿಯಮಾವಳಿ ಮತ್ತು ಪಿಇಟಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, 600/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ:
ಅರ್ಹ ಅಭ್ಯರ್ಥಿಗಳು 600/-ರೂ ಅರ್ಜಿ ಶುಲ್ಕವನ್ನು ಡಿಡಿ ಅಥವಾ ನೇರವಾಗಿ ನಗದು ವಿಭಾಗದಲ್ಲಿ ಪಾವತಿಸಿ ಅರ್ಜಿ ನಮೂನೆಯನ್ನು ಪಡೆದು ಡಿಸೆಂಬರ್ 26,2019ರಂದು ಸಂಜೆ 5 ಗಂಟೆಯೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲಾತಿಗಳೊಡನೆ ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ, ಖುದ್ದು ಅಥವಾ ಅಂಚೆ ಮೂಲಕ ಕಚೇರಿಯ ವಿಳಾಸಕ್ಕೆ ತಲುಪಿಸಬೇಕಿರುತ್ತದೆ.
ಕಛೇರಿಯ ವಿಳಾಸ:
ಪ್ರಾಂಶುಪಾಲರು,
ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜು,
ಮಂಡ್ಯ-571401.
ಅಧಿಕೃತ ವೆಬ್‌ಸೈಟ್: http://www.pescemandya.org/
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.