PGCIL: 53 ಕ್ಷೇತ್ರ ಮೇಲ್ವಿಚಾರಕ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ...

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ 53 ಕ್ಷೇತ್ರ ಮೇಲ್ವಿಚಾರಕ ಮತ್ತು ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 22,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಪಿಜಿಸಿಐಎಲ್ ನಲ್ಲಿ  53 ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಕ್ಷೇತ್ರ ಮೇಲ್ವಿಚಾರಕ ಮತ್ತು ಇಂಜಿನಿಯರ್
Organisation ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ (ಪಿಜಿಸಿಐಎಲ್‌)
Educational Qualification ಬಿ.ಇ/ಬಿ.ಟೆಕ್/ಬಿ.ಎಸ್ಸಿ ಮತ್ತು ಡಿಪ್ಲೋಮಾ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 23,000/- ರಿಂದ 30,000/-ರೂ ವೇತನ
Application Start Date December 12, 2019
Application End Date December 22, 2019

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್/ಬಿ.ಎಸ್ಸಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಡಿಸೆಂಬರ್ 22,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 29 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರದ ನೇಮಕಾತಿ ನಿಯಮಾನುಸಾರ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಕ್ಷೇತ್ರ ಮೇಲ್ವಿಚಾರಕ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000/- ರಿಂದ 30,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಕ್ಷೇತ್ರ ಇಂಜಿನಿಯರ್ ಹುದ್ದೆಗಳಿಗೆ 400/-ರೂ, ಕ್ಷೇತ್ರ ಮೇಲ್ವಿಚಾರಕ ಹುದ್ದೆಗಳಿಗೆ 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ (ಪಿಜಿಸಿಐಎಲ್‌)ದ ಕ್ಷೇತ್ರ ಮೇಲ್ವಿಚಾರಕ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.powergridindia.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಡಿಸೆಂಬರ್ 22,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Power Grid Corporation Of India Limited recruitment 2019 notification has been released on official website for the recruitment of 53 field supervisor and engineer posts. Interested candidates can apply through online before 22nd December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X